Tuesday, May 21, 2024

ಕ್ರೈಮ್ ಸಿಟಿಯಾಗಿ ಬದಲಾಗುತ್ತಿದೆ ಬೆಂಗಳೂರು: ಆರ್ ಅಶೋಕ್​

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಸಿಲಿಕಾನ್​ ಸಿಟಿ ಬೆಂಗಳೂರು ಕ್ರೈಮ್​ ಸಿಟಿಯಾಗುತ್ತಿದೆ ಎಂದು ವಿಪಕ್ಷ ನಾಯಕ ಆರ್​. ಅಶೋಕ್​ ಕಿಡಿಕಾರಿದ್ದಾರೆ.

ನಮ್ಮ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಅದಕ್ಕೆ ಉದಾಹರಣೆ, ಮಾಜಿ ಸಚಿವ ಗೋಪಾಲಯ್ಯ ಅವರಿಗೆ ಬಂದಿರುವ ಕೊಲೆ ಬೆದರಿಕೆ. ಕಾನೂನು ಸುವ್ಯವಸ್ಥೆ ಎಲ್ಲಿ ಸರಿ ಇರುತ್ತದೋ, ಅಲ್ಲಿಗೆ ಬಂಡವಾಳ‌ ಹರಿದು ಬರುತ್ತದೆ. ನಮ್ಮ ರಾಜ್ಯದಲ್ಲಿ ಅನೇಕ ಹೂಡಿಕೆ ಬರುತ್ತಿತ್ತು, ಆದರೆ ಈಗ ಹೂಡಿಕೆದಾರರ ಸಂಖ್ಯೆಯೇ ಕಡಿಮೆಯಾಗುತ್ತಿದೆ ಎಂದರು.

ದೌರ್ಜನ್ಯ ಪ್ರಕರಣದಲ್ಲಿ ಕರ್ನಾಟಕ ಈಗ 3ನೇ ಸ್ಥಾನ

ದೌರ್ಜನ್ಯ ಪ್ರಕರಣದಲ್ಲಿ ಕರ್ನಾಟಕ ಈಗ ಮೂರನೇ ಸ್ಥಾನದಲ್ಲಿದೆ.ಸೈಬರ್ ವಂಚನೆಯಲ್ಲಿ ನಂಬರ್ ಒನ್ ಸ್ಥಾನದಲ್ಲಿದೆ. 438 ಕೋಟಿ ಸೈಬರ್ ವಂಚನೆ ಆಗಿದೆ. ನಮ್ಮ ಸರ್ಕಾರ ಇದ್ದಾಗ ಬಾಲ ಮುಚ್ಚಿಕೊಂಡಿದ್ದ ಭಯೋತ್ಪಾದಕರು, ಬೀದಿ ಬೀದಿಗಳಲ್ಲಿ ಓಡಾಡುತ್ತಿದ್ದಾರೆ.

ಪಿಎಫ್‌ಐ ಸಂಘಟನೆಯವರು ಕೇಸ್ ವಾಪಸ್ ತೆಗೆದುಕೊಳ್ಳುತ್ತಾರೆ ಎಂದು ರಾಜಾರೋಷವಾಗಿ ಓಡಾಡುತ್ತಿದ್ದಾರೆ ಎಂದು ಅಶೋಕ್ ಹೇಳಿದರು.

 ‘ಕೈ’ ಸರ್ಕಾರದಲ್ಲಿ ಅಪರಾಧಗಳೇ ಹೆಚ್ಚು

ಜನ್ಮದಿನ ಕಾರ್ಯಕ್ರಮಕ್ಕೆ ಕಟೌಟ್, ಫ್ಲೆಕ್ಸ್ ಹಾಕುತ್ತಿದ್ದರು. ಈಗ ಕೋಲಾರದಲ್ಲಿ ರಾಜಾರೋಷವಾಗಿ ತಲ್ವಾರ್ ಹಾಕಿದ್ದಾರೆ. ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಅಪರಾಧ ಚಟುವಟಿಕೆಗಳು ಹೆಚ್ಚಾಗಿವೆ ಎಂದರು.

ಗುಪ್ತಚರ ಇಲಾಖೆ ಕೆಲಸ ಮಾಡುತ್ತಿದೆಯೋ, ಇಲ್ಲವೋ..? 

ಸ್ಲೀಪರ್ ಸೆಲ್​ಗಳಿಗೆ ಎಲ್ಲಿಂದ ಹಣ ಬರುತ್ತದೆ, ಯಾರು ಕೊಡ್ತಾರೆ ಎಂಬುದು ಅವರಿಗೆ ಗೊತ್ತಿರಲ್ಲ. ರಾಜ್ಯದಲ್ಲಿ ಗುಪ್ತಚರ ಇಲಾಖೆ ಕೆಲಸ ಮಾಡುತ್ತಿದೆಯೋ, ಇಲ್ಲವೋ ಗೊತ್ತಿಲ್ಲ. ಅದು ಐಸಿಯುನಲ್ಲಿ ಇದೆಯೋ, ಚಿಕಿತ್ಸೆ ಕೊಡಲಾಗ್ತಿದೆಯೋ ಗೊತ್ತಿಲ್ಲ ಎಂದು ಅವರು ಕಿಡಿಕಾರಿದರು.

 

RELATED ARTICLES

Related Articles

TRENDING ARTICLES