Wednesday, January 22, 2025

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಪ್ರೀತಿಪಾತ್ರರಿಂದ ಅದೃಷ್ಟ ಕೈ ಹಿಡಿಯುತ್ತೆ!

2024 ಫೆಬ್ರವರಿ 14ರ ಬುಧವಾರವಾದ ಇಂದು, ಚಂದ್ರನು ಮೀನ ರಾಶಿಯ ನಂತರ ಮೇಷ ರಾಶಿಯಲ್ಲಿ ಸಂಚಾರ ನಡೆಸುತ್ತಾನೆ. ಅಲ್ಲದೆ, ಇಂದು ಮಾಘ ಮಾಸದ ಶುಕ್ಲ ಪಕ್ಷದ ಐದನೇ ದಿನವಾಗಿದೆ ಮತ್ತು ಈ ದಿನಾಂಕವನ್ನು ವಸಂತ ಪಂಚಮಿ ಎಂದು ಕರೆಯಲಾಗುತ್ತದೆ.

ಜ್ಞಾನ ಮತ್ತು ಬುದ್ಧಿವಂತಿಕೆಯ ದೇವತೆಯಾದ ಸರಸ್ವತಿ ದೇವಿಯು ಈ ದಿನದಂದು ಕಾಣಿಸಿಕೊಂಡಳು ಎಂದು ನಂಬಲಾಗಿದೆ. ವಸಂತ ಪಂಚಮಿ ದಿನದಂದು ರವಿ ಯೋಗ, ಶುಕ್ಲ ಯೋಗ ಮತ್ತು ರೇವತಿ ನಕ್ಷತ್ರದ ಶುಭ ಸಂಯೋಜನೆಯು ರೂಪುಗೊಳ್ಳುತ್ತಿದೆ. ಒಟ್ಟಾರೆ ಗ್ರಹಗಳ ಸ್ಥಾನ ಬದಲಾವಣೆಯಿಂದ ಮೇಷದಿಂದ ಮೀನ ರಾಶಿವರೆಗಿನ ಎಲ್ಲಾ ರಾಶಿಯವರಿಗೆ ಇಂದಿನ ರಾಶಿ ಭವಿಷ್ಯ ಹೇಗಿರಲಿದೆ? ಯಾವ ರಾಶಿಯವರಿಗೆ ಅದೃಷ್ಟ? ಯಾವ ರಾಶಿಯವರು ಎಚ್ಚರದಿಂದಿರಬೇಕು ಎನ್ನುವುದನ್ನು ತಿಳಿದುಕೊಳ್ಳಿ.

ಮೇಷ: ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡುವವರ ಬಗ್ಗೆ ಎಚ್ಚರಿಕೆ ಇರಲಿ. ಅತಿಯಾದ ಒತ್ತಡ ಕಡಿಮೆ ಮಾಡಿಕೊಳ್ಳಲು ಆಧ್ಯಾತ್ಮಿಕ ಸಾಧನೆ ಅವಶ್ಯಕವಾಗಿದೆ. ಹಣಕಾಸಿನ ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಕೌಟುಂಬಿಕವಾಗಿ ಮಿಶ್ರ ಫಲ.

ವೃಷಭ: ಹಣಕಾಸಿನ ವ್ಯವಹಾರದಲ್ಲಿ ಪ್ರಗತಿ ಸಾಧಿಸಲಿದ್ದೀರಿ. ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯುವ ಅವಕಾಶ ಸಿಗಲಿದೆ. ಉತ್ತಮ ಆರೋಗ್ಯ ನಿಮ್ಮದಾಗಲಿದೆ. ಸಹದ್ಯೋಗಿಗಳಿಂದ ಕಿರಿಕಿರಿ ಇರಲಿದೆ, ಆದಷ್ಟು ತಾಳ್ಮೆಯಿಂದ ವರ್ತಿಸಿ. ಕೌಟುಂಬಿಕವಾಗಿ ಮಿಶ್ರ ಫಲ ಇರಲಿದೆ.

ಮಿಥುನ: ಬಂಧುಗಳು ಟೀಕೆಗಳನ್ನು ಮಾಡುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಒತ್ತಡ ಹೆಚ್ಚಾಗಲಿದ್ದು, ಮಾನಸಿಕ ನೆಮ್ಮದಿಯನ್ನು ಹಾಳು ಮಾಡುವ ಸಾಧ್ಯತೆ ಇದೆ. ಸಂಯಮದಿಂದ ವರ್ತಿಸಿ. ಆರ್ಥಿಕವಾಗಿ ಪ್ರಗತಿ ಕಾಣುವಿರಿ. ಕೌಟುಂಬಿಕವಾಗಿ ಸಾಧಾರಣ ಫಲ ಇರಲಿದೆ.

ಇದನ್ನೂ ಓದಿ: ಪ್ರಚಾರಕ್ಕೋಸ್ಕರ ಕೇಂದ್ರ ಸರ್ಕಾರ ಅಕ್ಕಿ ಕೊಡ್ತಿದೆ : ಸಚಿವ ಕೆ.ಎಚ್ ಮುನಿಯಪ್ಪ 

ಕಟಕ: ಪ್ರಮುಖ ವ್ಯಕ್ತಿಗಳ ಸಹಕಾರ ಸಿಗಲಿದೆ. ಆತುರದ ತೀರ್ಮಾನ ತೆಗೆದುಕೊಳ್ಳುವುದು ಬೇಡ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಆರೋಗ್ಯ ಪರಿಪೂರ್ಣವಾಗಿರುತ್ತದೆ. ಕೌಟುಂಬಿಕವಾಗಿ ಶುಭ ಫಲ.

ಸಿಂಹ: ಮಿತಿಮೀರಿದ ಕೆಲಸದ ಒತ್ತಡದಿಂದಾಗಿ ದಣಿವು ಉಂಟಾಗಲಿದೆ. ಸಾಧ್ಯವಾದಷ್ಟು ವಿಶ್ರಾಂತಿ ಪಡೆಯುವುದು ಉತ್ತಮ. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಮಕ್ಕಳಿಂದ ಸಂತೋಷ ಸಿಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲವಿದೆ.

ಕನ್ಯಾ: ನಿಮ್ಮ ವರ್ತನೆ ಕುಟುಂಬದ ಸದಸ್ಯರಿಗೆ ಕಿರಿಕಿರಿಯನ್ನು ಉಂಟು ಮಾಡುವ ಸಾಧ್ಯತೆ ಇದೆ. ಆರೋಗ್ಯದಲ್ಲಿ ವ್ಯತ್ಯಾಸ ಕಾಣುವಿರಿ. ಹಣಕಾಸು ಪ್ರಗತಿ ನಿಮ್ಮದಾಗಲಿದೆ. ಕೌಟುಂಬಿಕವಾಗಿ ಶುಭ ಫಲ.

ತುಲಾ: ಇಂದು ನಿಮ್ಮ ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಆತುರದಲ್ಲಿ ಮಾತನಾಡಿ ಅಪಾಯ ತಂದುಕೊಳ್ಳುವುದು ಬೇಡ. ಸಂಗಾತಿಯ ವರ್ತನೆ ಮುಜುಗರವನ್ನು ಉಂಟು ಮಾಡುವ ಸಾಧ್ಯತೆ ಇದೆ. ಮಾತಿಗೆ ಮಾತು ಬೆಳೆಸುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.

ವೃಶ್ಚಿಕ: ಕುಟುಂಬದ ಸದಸ್ಯರ ಆರೋಗ್ಯ ಕಡೆ ಗಮನ ಇರಲಿ. ನಕಾರಾತ್ಮಕ ಆಲೋಚನೆಗಳು ಮಾನಸಿಕವಾಗಿ ಹಾಗೂ ದೈಹಿಕವಾಗಿ ಬಳಲುವಂತೆ ಮಾಡಬಹುದು. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.

ಧನಸ್ಸು: ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಆಪ್ತರು ನಿಮ್ಮ ಬಳಿ ಅವರ ಸಮಸ್ಯೆಗಳನ್ನು ಹೇಳಿಕೊಳ್ಳಲಿದ್ದು, ನೀವು ಅವರಿಗೆ ಸ್ಪಂದಿಸುವಿರಿ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.

ಮಕರ: ಆರೋಗ್ಯ ಉತ್ತಮವಾಗಿರಲಿದೆ. ನಿಮ್ಮ ಮುಖ್ಯ ಕೆಲಸಕ್ಕೆ ಸ್ನೇಹಿತರ ಸಹಕಾರ ಸಿಗಲಿದೆ. ಆರ್ಥಿಕ ಪ್ರಗತಿ ಉತ್ತಮವಾಗಿರಲಿದೆ. ಕೆಲಸದ ನಿಧಾನಗತಿ ಸ್ವಲ್ಪ ಒತ್ತಡವನ್ನು ತರಲಿದೆ. ಅತಿರೇಕವಾಗಿ ಮಾತನಾಡುವುದು ಬೇಡ. ಸಾಧ್ಯವಾದಷ್ಟು ಸಮಾಧಾನದಿಂದ ವರ್ತಿಸಿ. ಕೌಟುಂಬಿಕವಾಗಿ ಮಿಶ್ರ ಫಲ.

ಕುಂಭ: ಉದ್ಯೋಗದ ಸ್ಥಳದಲ್ಲಿ ಪ್ರಶಂಸೆ ಸಿಗಲಿದೆ. ಹಿರಿಯರ ಮಾರ್ಗದರ್ಶನ ಸಿಗುತ್ತದೆ. ಅನಿರೀಕ್ಷಿತ ಖರ್ಚು ನಿಮ್ಮದಾಗಲಿದೆ. ಸಂಗಾತಿಯ ಸಂಪೂರ್ಣ ಬೆಂಬಲ ಸಿಗಲಿದೆ.

ಮೀನ: ಉದ್ಯೋಗದ ಸ್ಥಳದಲ್ಲಿ ಹೊಸ ಭರವಸೆಗಳು ಮೂಡಲಿವೆ. ಕಾರ್ಯಗಳಲ್ಲಿ ಯಶಸ್ಸು ನಿಮ್ಮದಾಗಲಿದೆ. ಪಾಲುದಾರಿಕೆ ವ್ಯವಹಾರವು ನಷ್ಟವನ್ನು ತರಲಿದೆ. ನಿಮ್ಮ ಉದಾರ ವರ್ತನೆಯನ್ನು ದುರುಪಯೋಗ ಪಡಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಕೌಟುಂಬಿಕವಾಗಿ ಮಿಶ್ರ ಫಲ.

RELATED ARTICLES

Related Articles

TRENDING ARTICLES