Wednesday, January 8, 2025

‘ಕೈ’ ತೊರೆದು ಬಿಜೆಪಿ ಸೇರಿದ ಲಾಲ್ ಬಹದ್ದೂರ್ ಶಾಸ್ತ್ರಿ ಮೊಮ್ಮಗ

ಉತ್ತರ ಪ್ರದೇಶ : ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಮೊಮ್ಮಗ ವಿಭಾಕರ್ ಶಾಸ್ತ್ರಿಯವರು ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಪಕ್ಷವನ್ನು ಸೇರಿದ್ದಾರೆ.

ಲಖನೌನನಲ್ಲಿ ಉತ್ತರ ಪ್ರದೇಶ ಬಿಜೆಪಿ ಅಧ್ಯಕ್ಷ ಭೂಪಿಂದರ್ ಸಿಂಗ್ ಹಾಗೂ ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.

ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಮಾತನಾಡಿ, ವಿಭಾಕರ್ ಅವರ ಪಕ್ಷ ಸೇ ರ್ಪಡೆಯು ಸಾಮಾಜಿಕ ಕಾರ್ಯಕರ್ತರಿಗೆ ಸಂದೇಶವಾಗಿದೆ. ವಿಭಾಕರ್ ಅವರು ಮಾಜಿ ಪ್ರಧಾನಿಯವರ ಕುಟುಂಬಕ್ಕೆ ಸೇರಿದವರು. ಈ ಬೆಳವಣಿಗೆಯಿಂದ ಪಕ್ಷಕ್ಕೆ ಲಾಭವಾಗಲಿದೆ ಎಂದು ಹೇಳಿದ್ದಾರೆ.

ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ

ಬಿಜೆಪಿ ಸೇರುವುದಕ್ಕೆ ಕೆಲವೇ ಗಂಟೆಗಳಿಗೆ ಮುನ್ನ ಕಾಂಗ್ರೆಸ್ ತೊರೆಯುತ್ತಿರುವುದಾಗಿ ವಿಭಾಕರ್ ಶಾಸ್ತ್ರಿ ಸಾಮಾಜಿಕ ಜಾಲತಾಣದಲ್ಲಿ (ಎಕ್ಸ್) ಪೋಸ್ಟ್ ಮಾಡಿದ್ದರು. ‘ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರೇ, ನಾನು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಈ ಮೂಲಕ ರಾಜೀನಾಮೆ ಸಲ್ಲಿಸುತ್ತಿದ್ದೇ ನೆ’ ಎಂದು ವಿಭಾಕರ್ ಶಾಸ್ತ್ರಿ ಬರೆದುಕೊಂಡಿದ್ದರು.

RELATED ARTICLES

Related Articles

TRENDING ARTICLES