Sunday, November 24, 2024

ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಮಾದಾರ ಚನ್ನಯ್ಯ ಸ್ವಾಮೀಜಿ ಕಣಕ್ಕೆ!?

ಚಿತ್ರದುರ್ಗ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪರಿಶಿಷ್ಟ ಜಾತಿಗೆ ಮೀಸಲಾಗಿರುವ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಮಾದಾರ ಚನ್ನಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಅವರನ್ನು ಕಣಕ್ಕೆ ಇಳಿಸಲು ಬಿಜೆಪಿ ಚಿಂತನೆ ನಡೆಸುತ್ತಿದೆ. ಸಂಘ ಪರಿವಾರದ ಪ್ರಭಾವ ಬಳಸಿ ಮಠಾಧೀಶರನ್ನು ಸಕ್ರಿಯ ರಾಜಕಾರಣಕ್ಕೆ ಕರೆತರುವ ಪ್ರಯತ್ನ ತೆರೆಮರೆಯಲ್ಲಿ ನಡೆಯುತ್ತಿದೆ.

ರಾಜಕೀಯ ಪ್ರವೇಶದ ಕುರಿತು ಇದುವರೆಗೆ ಮಾದಾರ ಚನ್ನಯ್ಯ ಸ್ವಾಮೀಜಿ ಯಾವುದೇ ನಿಲುವನ್ನು ಪ್ರಕಟಿಸಿಲ್ಲ, ಮಠಾಧೀಶರನ್ನು ಚುನಾವಣಾ ಅಖಾಡಕ್ಕೆ ಇಳಿಸಿದರೆ ರಾಜ್ಯ ರಾಜಕಾರಣದ ಚಿತ್ರಣ ಬದಲಾಗಬಹುದು ಎಂಬುದು ಬಿಜೆಪಿ ಲೆಕ್ಕಾಚಾರ. ಸ್ವಾಮೀಜಿ ಅಭಿಪ್ರಾಯ ಆಧರಿಸಿ ಮುಂದುವರಿಯಲು ಬಿಜೆಪಿ ಇಚ್ಛಿಸಿದೆ.

ಇದನ್ನೂ ಓದಿ: ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಪ್ರೀತಿಪಾತ್ರರಿಂದ ಅದೃಷ್ಟ ಕೈ ಹಿಡಿಯುತ್ತೆ!

ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆಯ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಅವರು ಚಿತ್ರದುರ್ಗ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಅವರು ರಾಜಕಾರಣದಿಂದ ದೂರ ಉಳಿಯುವ ಇಂಗಿತ ವ್ಯಕ್ತಪಡಿಸಿದ ಪರಿಣಾಮ ಪಕ್ಷವು ಸಮರ್ಥ ಅಭ್ಯರ್ಥಿಯ ಹುಡುಕಾಟದಲ್ಲಿ ತೊಡಗಿದ್ದು, ರಾಜ್ಯ ರಾಜಕಾರಣದಲ್ಲಿ ಹೊಸ ಪ್ರಯೋಗಕ್ಕೆ ಸಜ್ಜಾಗಿದೆ. ಸ್ಥಳೀಯರಿಗೆ ಅವಕಾಶ ನೀಡಬೇಕು ಎಂಬ ಕೂಗಿಗೂ ಮನ್ನಣೆ ನೀಡಿದಂತಾಗುತ್ತದೆ ಎಂಬ ಚರ್ಚೆಗಳು ಮುನ್ನೆಲೆಗೆ ಬಂದಿವೆ.

ತುಮಕೂರು ಜಿಲ್ಲೆಯ ಶಿರಾ, ಪಾವಗಡ ಸೇರಿದಂತೆ ಎಂಟು ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿಯ ಮಾದಿಗ ಸಮುದಾಯದ ಮತಗಳು ಹೆಚ್ಚಿನ ಸಂಖ್ಯೆಯಲ್ಲಿವೆ. ರಾಜ್ಯದ ಹಲವು ಭಾಗಗಳಲ್ಲಿ ದಲಿತ ಎಡಗೈ ಸಮುದಾಯದ ಮತಗಳು ನಿರ್ಣಾಯಕವಾಗಿವೆ. ಮಾದಾರ ಚನ್ನಯ್ಯ ಗುರುಪೀಠದ ಮಠಾಧೀಶರನ್ನು ಅಭ್ಯರ್ಥಿಯನ್ನಾಗಿ ಮಾಡಿದರೆ ಇತರ ಕ್ಷೇತ್ರಗಳಲ್ಲಿಯೂ ಅನುಕೂಲವಾಗಲಿದೆ ಎಂಬುದು ಬಿಜೆಪಿ ಲೆಕ್ಕಾಚಾರ.

RELATED ARTICLES

Related Articles

TRENDING ARTICLES