ಬೆಂಗಳೂರು: HSRP ನಂಬರ್ ಪ್ಲೇಟ್ ಅವಳಡಿಸುವ ಅವಧಿಯನ್ನು ಮೂರು ತಿಂಗಳು ವಿಸ್ತರಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ವಾಹನಗಳಿಗೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ (HSRP) ನಂಬರ್ ಪ್ಲೇಟ್ ಬಗ್ಗೆ ವಿಧಾನ್ ಪರಿಷತ್ನಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಸದಸ್ಯ ಮಾದೇಗೌಡ ಅವರು ಮಾತನಾಡಿ “ರಾಜ್ಯದಲ್ಲಿ ಎರಡು ಕೋಟಿಗೂ ಹೆಚ್ಚಿನ ವಾಹನಗಳಿವೆ. ಹಳ್ಳಿ ಜನರು ವಾಹನಗಳಿಗೆ ಇನ್ನೂ ಹೆಚ್ಎಸ್ಆರ್ಪಿ ನೇಮ್ ಪ್ಲೇಟ್ ಅಳವಡಿಸಬೇಕು. ಆನ್ಲೈನ್ನಲ್ಲಿ ನೊಂದಣಿ ಮಾಡಬೇಕಿರುವ ಹಿನ್ನೆಲೆಯಲ್ಲಿ ಫೇಕ್ ವೆಬ್ ಸೈಟ್ ಹಾವಳಿ ಹೆಚ್ಚಾಗಿದೆ ಇದರ ಬಗ್ಗೆ ಸಾರಿಗೆ ಇಲಾಖೆ ಕ್ರಮ ಕೈಗೊಳ್ಳಬೇಕು. ಅಲ್ಲದೆ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಅವಧಿಯನ್ನು ಸರ್ಕಾರ ನೀಡಿರುವ ಗಡುವು ವಿಸ್ತರಿಸಬೇಕು” ಎಂದು ಪ್ರಶ್ನಿಸಿದರು.
ಇದನ್ನೂ ಓದಿ: HSRP Number Plate:ನಿಮ್ಮ ವಾಹನಕ್ಕೆ HSRP ನಂಬರ್ ಪ್ಲೇಟ್ ಬೇಗ ಹಾಕಿಸಿ, ದಂಡ ತಪ್ಪಿಸಿ! ಇನ್ನೂ 7 ದಿನ ಮಾತ್ರ ಬಾಕಿ
ಇದಕ್ಕೆ ಉತ್ತರಿಸಿದ ಸಚಿವ ರಾಮಲಿಂಗಾರೆಡ್ಡಿ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸುವ ಗಡುವನ್ನು ಮೂರು ತಿಂಗಳು ವಿಸ್ತರಿಸಲಾಗುತ್ತದೆ. ಇನ್ನು ಫೇಕ್ ವೆಬ್ ಸೈಟ್ ಬಗ್ಗೆ ಎಚ್ಚರ ವಹಿಸಲಾಗುತ್ತದೆ. ಈ ಯೋಜನೆ ಪಾರದರ್ಶಕವಾಗಿದೆ ಎಂದು ಸದನಕ್ಕೆ ತಿಳಿಸಿದರು.
ಏನಿದು ಎಚ್ಎಸ್ಆರ್‌ಪಿ ನಂಬರ್ ಪ್ಲೇಟ್?
ಎಚ್‌ಎಸ್‌ಆರ್‌ಪಿ ಎಂದರೆ ಅತಿ ಸುರಕ್ಷಿತ ನೋಂದಣಿ ಫಲಕವಾಗಿದೆ. ಇವುಗಳನ್ನು ಅಲ್ಯೂಮಿನಿಯಂ ಲೋಹದಿಂದ ಮಾಡಿರುತ್ತಾರೆ. ಈ ಪ್ಲೇಟ್‌ನ ಮೇಲ್ಭಾಗದ ಎಡಬದಿಯಲ್ಲಿ ಅಶೋಕ ಚಕ್ರ ಮುದ್ರೆಯ 20X20 ಮಿ.ಮೀ ಅಳತೆಯ ಕ್ರೋಮಿಯಂ ಹೋಲೋಗ್ರಾಮ್ ಇರುತ್ತದೆ. ಇಂಗ್ಲಿಷ್ ಅಕ್ಷರಗಳು ಹಾಗೂ ನಂಬರ್‌ಗಳು ಉಬ್ಬಿಕೊಂಡಿರುವ ರೀತಿ ಅಚ್ಚಾಗಿರುತ್ತವೆ. ಈ ನಂಬರ್ ಪ್ಲೇಟ್‌ಗಳನ್ನು ಎರಡು ಲಾಕ್ ಪಿನ್‌ಗಳನ್ನು ಬಳಸಿ ಅಳವಡಿಸುತ್ತಾರೆ. ಇದರಿಂದ ಒರಿಜಿನಲ್ ಯಾವುದು, ನಕಲಿ ಯಾವುದು ಎಂದು ಸುಲಭವಾಗಿ ಗುರುತಿಸಬಹುದು.