ಬೆಂಗಳೂರು : ಮುಂಬರುವ ಟಿ-20 ವಿಶ್ವಕಪ್ ಕ್ರಿಕೆಟ್ ಟೂರ್ನಿಗೆ ಹಿಟ್ ಮ್ಯಾನ್ ರೋಹಿತ್ ಶರ್ಮಾ ಅವರೇ ನಾಯಕರಾಗಿ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ.
ಈ ಕುರಿತು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅಧಿಕೃತಪಡಿಸಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ರೋಹಿತ್ ಶರ್ಮಾ ಅವರ ನಾಯಕತ್ವದಲ್ಲಿ ಭಾರತ 2024ರ ಟಿ-20 ವಿಶ್ವಕಪ್ ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.
ಜಯ್ ಶಾ ಹೇಳಿಕೆಯಿಂದ ರೋಹಿತ್ ಶರ್ಮಾ ಹಾಗೂ ಹಾರ್ದಿಕ್ ಪಾಂಡ್ಯ ಇಬ್ಬರಲ್ಲಿ ಯಾರು ನಾಯಕ ಎಂಬ ಬಗ್ಗೆ ಸ್ಪಷ್ಟನೆ ಲಭಿಸಿದೆ. ಹಾರ್ದಿಕ್ ಪಾಂಡ್ಯ ಉಪನಾಯಕನ ಜವಾಬ್ದಾರಿ ನಿಭಾಯಿಸಲಿದ್ದಾರೆ. ಈ ಬಗ್ಗೆ ಬಿಸಿಸಿಐ ಅಧಿಕೃತ ಹೇಳಿಕೆ ನೀಡಬೇಕಿದೆ. ಈಗಾಗಲೇ ಮುಂಬೈ ಇಂಡಿಯನ್ಸ್ ತಂಡದ ನಾಯಕತ್ವದಿಂದ ರೋಹಿತ್ ಶರ್ಮಾ ಅವರನ್ನು ಕೆಳಗಿಳಿಸಿ ಹಾರ್ದಿಕ್ ಪಾಂಡ್ಯಗೆ ನಾಯಕತ್ವದ ಜವಾಬ್ದಾರಿ ನೀಡಿರುವುದು ಗೊತ್ತೇ ಇದೆ.
ಈ ಬಾರಿ ಐಪಿಎಲ್ ಭಾರತದಲ್ಲಿ ಡೌಟ್?
ಐಪಿಎಲ್ಗೆ ಭಾರತದಲ್ಲಿ ಭಾರಿ ಕ್ರೇಜ್ ಇದೆ. ಎರಡು ತಿಂಗಳು ನಡೆಯುವ ಚುಟುಕು ಕ್ರಿಕೆಟ್ ದೇಶದಲ್ಲಿ ಹಬ್ಬದ ವಾತಾವರಣ ಉಂಟು ಮಾಡುತ್ತದೆ. ಆದರೆ, ಈ ಬಾರಿ ಚುನಾವಣೆಯಿಂದಾಗಿ ದುಬೈನಲ್ಲಿ ಐಪಿಎಲ್ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಇದಕ್ಕೆ ಐಪಿಎಲ್ ಚೇರ್ಮನ್ ಅರುಣ್ ಸಿಂಗ್ ಸ್ಪಷ್ಟನೆ ನೀಡಿದ್ದಾರೆ. ಈ ವರ್ಷ ಐಪಿಎಲ್ ಭಾರತದಲ್ಲೇ ನಡೆಯಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
Jay Shah said “India will win the T20 World Cup under the leadership of Rohit Sharma”. 🇮🇳pic.twitter.com/kPYEyf2WwO
— Johns. (@CricCrazyJohns) February 14, 2024