Wednesday, January 22, 2025

ಅರಬ್ಬರ ನೆಲದಲ್ಲಿ ಮೊದಲ ಹಿಂದೂ ದೇಗುಲ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

ಅಬುಧಾಬಿ: ಅರಬ್ಬರ ನೆಲದಲ್ಲಿ ಮೊದಲ  ಹಿಂದೂ ದೇಗುಲವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. 

ಯುಎಇ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಅಬುಧಾಬಿಯಲ್ಲಿ ನಿರ್ಮಾಣ ಮಾಡಲಾಗಿರುವ ಬಿಎಪಿಎಸ್ ಹಿಂದೂ ದೇವಾಲಯವನ್ನು ಲೋಕಾರ್ಪಣೆಗೊಳಿಸಿ ಹಲವು ಧಾರ್ಮಿಕ ವಿಧಿ ವಿಧಾನಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪಾಲ್ಗೊಂಡರು. ಆರತಿ ವಿಧಿವಿಧಾನವನ್ನು ಪೂರ್ಣಗೊಳಿಸಿದರು. ದೇವರ ಪಾದಾರವಿಂದಗಳಿಗೆ ಪುಷ್ಪಸಮರ್ಪಿಸಿದರು.

ದೇವಾಲಯವನ್ನು ಪ್ರವೇಶಿಸುವ ಮುನ್ನ ಪ್ರಧಾನಿ ಮೋದಿ ಅವರಿಗೆ ಭವ್ಯ ಸ್ವಾಗತ ನೀಡಲಾಯಿತು. ಈ ವೇಳೆ, ಭಾರತೀಯ ಸಮುದಾಯದ ಜನರು ಭಾರೀ ಸಂಖ್ಯೆಯಲ್ಲಿ ನೆರೆದಿದ್ದರು.

RELATED ARTICLES

Related Articles

TRENDING ARTICLES