Wednesday, January 22, 2025

ಆಟೋ ಹಾಗೂ ಟಾಟಾ ಏಸ್ ನಡುವೆ ಭೀಕರ ಅಪಘಾತ, ನಾಲ್ವರ ಸ್ಥಿತಿ ಗಂಭೀರ

ಕಾರವಾರ : ಆಟೋ ಹಾಗೂ ಟಾಟಾ ಏಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಆಟೋ ಚಾಲಕ ಸೇರಿ ನಾಲ್ವರಿಗೆ ಗಂಭೀರ ಗಾಯವಾಗಿದೆ.

ಕಾರವಾರದ ಭಟ್ಕಳ ತಾಲೂಕಿನ ಬೆಳಕೆ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಈ ಘಟನೆ ನಡೆದಿದೆ. ಅಪಘಾತದಲ್ಲಿ ಗಾಯಗೊಂಡ ನಾಲ್ವರನ್ನ ಕುಂದಾಪುರ ಹಾಗೂ ಮಣಿಪಾಲ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಅಪಘಾತದಲ್ಲಿ ತೀವ್ರ ಗಾಯಗೊಂಡ ಮಹಿಳೆಯ ಸ್ಥಿತಿ ಚಿಂತಾಜನಕವಾಗಿದೆ. ಸ್ಥಳಕ್ಕೆ ಭಟ್ಕಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಭಟ್ಕಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಡುಕೋಣ ದಾಳಿಗೆ ವ್ಯಕ್ತಿಗೆ ಗಾಯ

ಕಾಫಿ ತೋಟದಲ್ಲಿ ಕೆಲಸ ಮಾಡುವ ವೇಳೆ ಕಾಡುಕೋಣ ದಾಳಿ ಮಾಡಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಕಾರಮಗ್ಗೆ ಗ್ರಾಮದಲ್ಲಿ ನಡೆದಿದೆ. ಕಾಡುಕೋಣ ತಿವಿತದಿಂದ ಕಾರಮಗ್ಗೆ ಗ್ರಾಮದ ನಾರಾಯಣ ಎಂಬುವವರಿಗೆ ಗಾಯವಾಗಿದೆ.

ಕಾಫಿ ತೋಟದಲ್ಲಿ ಕೆಲಸ ಮಾಡುವ ವೇಳೆ ಈ ಅವಘಡ ಸಂಭವಿಸಿದೆ. ಘಟನೆಯಲ್ಲಿ ಗಾಯಗೊಂಡ ನಾರಾಯಣರಿಗೆ ತೊಡೆ, ಸೊಂಟ ಹಾಗೂ ತಲೆಗೆ ಗಾಯಗಳಾಗಿವೆ. ಗಾಯಾಳುಗೆ ಸಕಲೇಶಪುರದ ಸರ್ಕಾರಿ ಕ್ರಾಫರ್ಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ತೋಟದಲ್ಲಿದ್ದ ಕಾಡುಕೋಣಗಳನ್ನು ಕಾಡಿಗೆ ಓಡಿಸಿದ್ದಾರೆ.

RELATED ARTICLES

Related Articles

TRENDING ARTICLES