Friday, November 22, 2024

ನಾಳೆ ಬೆಳಗ್ಗೆ 10.15ಕ್ಕೆ ಸಿಎಂ ಸಿದ್ದರಾಮಯ್ಯ ದಾಖಲೆಯ ಬಜೆಟ್ ಮಂಡನೆ

ಬೆಂಗಳೂರು: ನಾಳೆ ಸಿಎಂ ಸಿದ್ದರಾಮಯ್ಯ ಬಜೆಟ್​ ಮಂಡನೆ ಮಾಡಲಾಗಿದೆ. ಈ ಸಲದ ಬಜೆಟ್​ ಮೇಲೆ ಭಾರೀ ನಿರೀಕ್ಷೆಗಳಿವೆ.

ಹೌದು, ಇನ್ನು ಎರಡು ತಿಂಗಳಲ್ಲಿ ದೇಶದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಈ ಸಂದರ್ಭದಲ್ಲಿ ಎಲ್ಲಾ ರಾಜ್ಯಗಳಿಗೂ ಈ ಚುನಾವಣೆ ಮಹತ್ವದ್ದಾಗಿದೆ. ಕೇಂದ್ರದಲ್ಲಿ ಪ್ರಸ್ತುತ ಎನ್ ಡಿ ಎ ಸರ್ಕಾರವಿದ್ದು ರಾಜ್ಯದ 28 ಲೋಕಸಭಾ ಸ್ಥಾನಗಳಲ್ಲಿ ಬಹುತೇಕ ಬಿಜೆಪಿ ಸಂಸದರಿದ್ದಾರೆ.

ಮುಂಬರುವ ಚುನಾವಣೆಯಲ್ಲಿ ರಾಜ್ಯದಿಂದ ಕಾಂಗ್ರೆಸ್ ಗೆ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ತವಕದಲ್ಲಿರುವ ರಾಜ್ಯ ಆಡಳಿತಾರೂಢ ಕಾಂಗ್ರೆಸ್ ಜನರನ್ನು ಸೆಳೆಯಲು ಹಲವು ತಂತ್ರಗಳನ್ನು ಮಾಡುತ್ತಿದೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಮಂಡಿಸುತ್ತಿರುವ 15ನೇ ಬಜೆಟ್ ಮಹತ್ವದ್ದಾಗಿದೆ.

ನಾಳೆ ವಿಶೇಷ ಸಂಪುಟ ಸಭೆ

ಕರ್ನಾಟಕದ ಮಟ್ಟಿಗೆ ಇದೊಂದು ಹೊಸ ದಾಖಲೆಯಾಗಿದೆ. ಲೋಕಸಭೆ ಚುನಾವಣೆಗೆ ಹೊತ್ತಲ್ಲೇ ಬಜೆಟ್ ಮಂಡನೆ ಮಾಡುತ್ತಿರುವುದರಿಂದ ಮಹತ್ವದ ಘೋಷಣೆಗಳು ಹೊರಬೀಳುವ ನಿರೀಕ್ಷೆಗಳಿವೆ.ಲೋಕಸಭೆ ಚುನಾವಣೆ ಮೇಲೆ ಗಮನ ಇಟ್ಟುಕೊಂಡು ರಾಜ್ಯ ಬಜೆಟ್​​​ನಲ್ಲಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡುವ ಸಾಧ್ಯೆತೆಯೂ ಇದೆ. ಬಜೆಟ್ ಮಂಡನೆಗೂ ಮುನ್ನ ಸಿದ್ದರಾಮಯ್ಯ ಅವರು ವಿಶೇಷ ಸಂಪುಟ ಸಭೆ ನಡೆಸಲಿದ್ದಾರೆ.

ಬಜೆಟ್​ ಎಷ್ಟು ಹೊತ್ತಿಗೆ?

ನಾಳೆ ಫೆ.16ರ ಬೆಳಗ್ಗೆ 10.15ಕ್ಕೆ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಬಜೆಟ್ ಮಂಡನೆ ಮಾಡಲಿದ್ದಾರೆ. ಬಜೆಟ್ ನೇರ ಪ್ರಸಾರ ಸರ್ಕಾರದ ಮಾಧ್ಯಮದಲ್ಲಿ ನೇರ ಪ್ರಸಾರವಾಗಲಿದೆ. ಬಜೆಟ್​​ ಮಂಡನೆ ಮುನ್ನ ಸಿದ್ದರಾಮಯ್ಯ ಅವರು ವಿಶೇಷ ಸಂಪುಟ ಸಭೆ ನಡೆಸಲಿದ್ದಾರೆ. ಇನ್ನು ಸಿದ್ದರಾಮಯ್ಯ ಅವರ 15ನೇ ಬಾರಿಯ ಬಜೆಟ್ ಮಂಡಣೆ ಇದಾಗಿರಲಿದ್ದು ಕರ್ನಾಟಕದ ಮಟ್ಟಿಗೆ ಇದೊಂದು ಹೊಸ ದಾಖಲೆಯಾಗಿದೆ.

ಈ ಬಾರಿ ರಾಜ್ಯದ ಬಜೆಟ್ ಗಾತ್ರ 3.80 ಲಕ್ಷ ಕೋಟಿ ರೂಪಾಯಿಗೆ ಏರಿಕೆಯಾಗಲಿದೆ. ಈವರೆಗೂ ರಾಜ್ಯದ ಬಜೆಟ್ ಗಾತ್ರ 3.27 ಲಕ್ಷ ಕೋಟಿ ರೂ. ದಾಟಿರಲಿಲ್ಲ. ಆದರೆ ಈ ಬಾರಿ ಸುಮಾರು 50 ಸಾವಿರ ಕೋಟಿ ರೂ.ಹೆಚ್ಚಳವಾಗಲಿದೆ. ಇದರೊಂದಿಗೆ ಈ ಬಾರಿ ಬಜೆಟ್​ ಗಾತ್ರ 3.80 ಲಕ್ಷ ಕೋಟಿ ರೂ.ತಲುಪಲಿದೆ.

RELATED ARTICLES

Related Articles

TRENDING ARTICLES