Sunday, December 22, 2024

ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅವರಿಗೆ ಉಸಿರಾಟದ ತೊಂದರೆ; ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅವರು ಅನಾರೋಗ್ಯಕ್ಕೀಡಾಗಿದ್ದು, ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ವೈದ್ಯರು ಚಿಕಿತ್ಸೆ ಮುಂದುವರೆಸಿದ್ದಾರೆ.

ದೇವೇಗೌಡರಿಗೆ ಗುರುವಾರ ಬೆಳಿಗ್ಗೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಮಣಿಪಾಲ್‌ ಆಸ್ಪತ್ರೆಗೆ ಕರೆದುಕೊಂಡೊ ಹೋಗಲಾಗಿದೆ. ಅಲ್ಲಿನ ಶ್ವಾಸಕೋಶ ತಜ್ಞ ಡಾ.ಸತ್ಯನಾರಾಯಣ ಅವರು ಪರೀಕ್ಷೆ ನಡೆಸಿ, ಆಸ್ಪತ್ರೆಯಲ್ಲಿಯೇ ದಾಖಲಿಸಿಕೊಂಡು ನಿಗಾವಹಿಸಿದ್ದಾರೆ.

ಸದ್ಯ ದೇವೇಗೌಡರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಆತಂಕ ಪಡುವ ಅಗತ್ಯ ಇಲ್ಲ ಎಂದು ಮಣಿಪಾಲ್‌ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ.

RELATED ARTICLES

Related Articles

TRENDING ARTICLES