ಬೆಂಗಳೂರು: ‘ಮದ್ಯ’ ಪ್ರಿಯರಿಗೆ ಬಜೆಟ್ನಲ್ಲಿ ಸರ್ಕಾರ ಬಿಗ್ ಶಾಕ್ ನೀಡದೆ.
ಮದ್ಯದ ಘೋಷಿತ ಸ್ಲಾಬ್‌ಗಳನ್ನು ತರ್ಕಬದ್ಧಗೊಳಿಸುವ ಮೂಲಕ ನೆರೆ ರಾಜ್ಯಗಳ ಮದ್ಯದ ಬೆಲೆಗಳಿಗೆ ಅನುಗುಣವಾಗಿ IML, ಬಿಯರ್ ಸ್ಲಾಬ್ ಪರಿಷ್ಕರಣೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಿಸಿದರು.
2023-24ನೇ ಸಾಲಿನ ಜನವರಿ ತಿಂಗಳ ಅಂತ್ಯದವರೆಗೆ, ಅಬಕಾರಿ ತೆರಿಗೆಯಿಂದ 28,181 ಕೋಟಿ ರೂ.ಗಳು ಸ್ವೀಕೃತವಾಗಿರುತ್ತದೆ. 2024-25ನೇ ಸಾಲಿಗೆ 38,525 ಕೋಟಿ ರೂ.ಗಳ ರಾಜಸ್ವ ಸಂಗ್ರಹಣೆ ಗುರಿಯನ್ನು ನಿಗದಿಪಡಿಸಲಾಗಿದೆ ಎಂದು ಅವರು ತಿಳಿಸಿದರು.