Friday, May 17, 2024

ಅಲ್ಪಸಂಖ್ಯಾತರಿಗೆ ಬಂಪರ್ : ಯಾವ್ಯಾವ ಸಮುದಾಯಕ್ಕೆ ಎಷ್ಟು ಅನುದಾನ? ಇಲ್ಲಿದೆ ಮಾಹಿತಿ

ಬೆಂಗಳೂರು : ರಾಜ್ಯ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅಲ್ಪ ಸಂಖ್ಯಾತ ಕಲ್ಯಾಣ ಯೋಜನೆಗಳಿಗೆ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಯಾವ್ಯಾವ ಸಮುದಾಯಕ್ಕೆ ಎಷ್ಟು ಅನುದಾನ ಘೋಷಿಸಲಾಗಿದೆ ಎಂಬುದರ ಡಿಟೇಲ್ಸ್ ಇಲ್ಲಿದೆ.

  • ವಕ್ಫ್​​ ಆಸ್ತಿಗಳ ಸಂರಕ್ಷಣೆಗೆ 100 ಕೋಟಿ
  • ಕ್ರಿಶ್ಚಿಯನ್ ಸಮುದಾಯಕ್ಕೆ 200 ಕೋಟಿ
  • ತಿರುಪತಿಯಲ್ಲಿ 200 ಕೋಟಿ ವೆಚ್ಚದಲ್ಲಿ ವಸತಿ ಗೃಹ
  • ವಾರಾಣಸಿಯಲ್ಲಿ 5 ಕೋಟಿ ವೆಚ್ಚದಲ್ಲಿ ವಸತಿ ಸೌಲಭ್ಯ
  • ಘಾಟಿ ಸುಬ್ರಹ್ಮಣ್ಯ ದೇವಸ್ಥಾನ ಅಭಿವೃದ್ಧಿ
  • ಅಂಜನಾದ್ರಿ ಅಭಿವೃದ್ಧಿಗೆ 100 ಕೋಟಿ

ಮುಂಬರುವ ಲೋಕಸಭಾ ಚುನಾವಣೆ ಮೇಲೆ ಕಣ್ಣಿಟ್ಟು ಬಜೆಟ್‌ ಮಂಡಿಸಿರುವ ಸಿಎಂ ಸಿದ್ದರಾಮಯ್ಯ ಅಲ್ಪಸಂಖ್ಯಾತರ ಒಲೈಕೆಗೆ ಮುಂದಾಗಿದ್ದಾರೆ. ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮಕ್ಕೆ ಈ ಬಾರಿಯ ಬಜೆಟ್‌ನಲ್ಲಿ 393 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ.

ಸಿದ್ದರಾಮಯ್ಯ ಅವರು ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಸಾಕಷ್ಟು ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿನ ವಕ್ಫ್‌ ಆಸ್ತಿಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನ ಒದಗಿಸಲಾಗುವುದು ಸಿದ್ದರಾಮಯ್ಯ ಘೋಷಿಸಿದ್ದಾರೆ. ಮಂಗಳೂರಿನಲ್ಲಿ ಹಜ್ ಭವನ ನಿರ್ಮಾಣಕ್ಕೆ 10 ಕೋಟಿ ರೂಪಾಯಿ ಅನುದಾನ ನೀಡಲು ಈ ಬಜೆಟ್‌ನಲ್ಲಿ ನಿರ್ಧರಿಸಲಾಗಿದೆ. ಇನ್ನೂ ಕ್ರಿಶ್ಚಿಯನ್‌ ಸಮುದಾಯದ ಅಭಿವೃದ್ಧಿಗಾಗಿ 200 ಕೋಟಿ ರೂಪಾಯಿ ಅನುದಾನ ಮೀಸಲಿಡಲಾಗಿದೆ.

ತಿರುಪತಿಯಲ್ಲಿ 200 ಕೋಟಿ ವೆಚ್ಚದಲ್ಲಿ ವಸತಿ ಗೃಹ

ಕಾಂಗ್ರೆಸ್​ ಹಿಂದೂ ಧರ್ಮ ವಿರೋಧಿ ಎಂದು ಅಣಕಿಸುತ್ತಿದ್ದ ಪ್ರತಿಪಕ್ಷಗಳಿಗೆ ಸರ್ಕಾರ ಮದ್ದು ಅರೆದಿದೆ. ಹೊರ ರಾಜ್ಯಗಳಲ್ಲಿರುವ ಪುಣ್ಯ ಕ್ಷೇತ್ರಗಳಿಗೂ ಅನುದಾನ ಮೀಸಲಿಟ್ಟಿದೆ. ತಿರುಮಲ, ಶ್ರೀಶೈಲಂ, ವಾರಾಣಸಿ, ಗುಡ್ಡಾಪುರಕ್ಕೆ ಭೇಟಿ ನೀಡುವ ಕರ್ನಾಟಕದ ಭಕ್ತಾಧಿಗಳಿಗೆ ಅನುಕೂಲವಾಗಲೆಂದು ವಸತಿ ಗೃಹ ನಿರ್ಮಾಣ ಮಾಡಲಾಗುತ್ತದೆ.

ವಾರಾಣಸಿಯಲ್ಲಿ 5 ಕೋಟಿ ವೆಚ್ಚದಲ್ಲಿ ವಸತಿ ಸೌಲಭ್ಯ

ತಿರುಪತಿಯಲ್ಲಿ 200 ಕೋಟಿ ವೆಚ್ಚದಲ್ಲಿ ಕರ್ನಾಟಕದ ವಸತಿ ಗೃಹ, ಗುಡ್ಡಾಪುರ ಕ್ಷೇತ್ರದಲ್ಲಿ 11 ಕೋಟಿ ವೆಚ್ಚದಲ್ಲಿ ವಸತಿ ಕಟ್ಟಡ, ವಾರಾಣಸಿಯಲ್ಲಿ 5 ಕೋಟಿ ವೆಚ್ಚದಲ್ಲಿ ವಸತಿ ಸೌಲಭ್ಯ ವ್ಯವಸ್ಥೆ ಹಾಗೂ ಶ್ರೀಶೈಲಂನಲ್ಲಿ 85 ಕೋಟಿ ವೆಚ್ಚದಲ್ಲಿ ರಾಜ್ಯದ ವಸತಿ ನಿಲಯ ಕಟ್ಟಡ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ.

ಅಂಜನಾದ್ರಿ ಅಭಿವೃದ್ಧಿಗೆ 100 ಕೋಟಿ ಅನುದಾನ

ದೊಡ್ಡಬಳ್ಳಾಪುರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನ ಅಭಿವೃದ್ಧಿಗೆ ರಾಜ್ಯ ಸರ್ಕಾರ ಸಂಕಲ್ಪ ಮಾಡಿದೆ. ದೇಗುಲ ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚಿಸುವುದಾಗಿ ಬಜೆಟ್‌ ಭಾಷಣದಲ್ಲಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಅಲ್ಲದೇ ಕೊಪ್ಪಳದ ಹುಲಿಗೆಮ್ಮ ದೇವಿ ಅಭಿವೃದ್ಧಿಗೂ ಪ್ರತ್ಯೇಕ ಪ್ರಾಧಿಕಾರ ರಚಿಸಲಾಗಿದೆ. ಇನ್ನೂ ಕೊಪ್ಪಳದ ಅಂಜನಾದ್ರಿ ಅಭಿವೃದ್ಧಿಗೆ 100 ಕೋಟಿ ವಿಶೇಷ ಅನುದಾನ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ಜೈನ ಅಭಿವೃದ್ಧಿಗೆ ಸಿದ್ದರಾಮಯ್ಯ ಸರ್ಕಾರ 50 ಕೋಟಿ ಮೀಸಲಿಟ್ಟಿದೆ. ರಾಜ್ಯದಿಂದ ಕಾಶಿ ಯಾತ್ರೆ ಕೈಗೊಳ್ಳುವ ಸುಮಾರು 30 ಸಾವಿರ ಯಾತ್ರಾರ್ಥಿಗಳಿಗೆ ಸರ್ಕಾರದಿಂದ ತಲಾ 5 ಸಾವಿರ ರೂಪಾಯಿ ಸಹಾಯಧನ ನೀಡುವುದಾಗಿ ಬಜೆಟ್‌ನಲ್ಲಿ ಘೋಷಿಸಲಾಗಿದೆ.

RELATED ARTICLES

Related Articles

TRENDING ARTICLES