Tuesday, June 18, 2024

ಸಿದ್ದರಾಮಯ್ಯ ಬಜೆಟ್ ಅಮೃತ ಅಲ್ಲ, ವಿಷ : ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು : ಸಿದ್ದರಾಮಯ್ಯ ಬಜೆಟ್ ನೋಡಿದ್ರೆ ಅಮೃತ ಅಲ್ಲ, ವಿಷ. ವಿನಾಶ ಕಾಲ ಅನ್ನೋದು ತಿಳಿಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಕುಟುಕಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ರಾಜ್ಯದಲ್ಲಿ 15ನೇ ಬಜೆಟ್ ಮಂಡಿಸಿರುವ ದಾಖಲೆ ಬಗ್ಗೆ ಚರ್ಚೆಯಾಗುತ್ತಿದೆ. ಸಿದ್ದರಾಮಯ್ಯ ಬಜೆಟ್ ವಿನಾಶ ಕಾಲವಾಗಿದೆ ಎಂದು ಟೀಕಿಸಿದರು.

ದೇಶದಲ್ಲಿ ಅಮೃತ ಕಾಲದ ಬಗ್ಗೆ ಚರ್ಚೆಯಾಗುತ್ತಿದೆ. ಸಿದ್ದರಾಮಯ್ಯ ಹಲವಾರು ಸುಳ್ಳುಗಳನ್ನು ರಾಜ್ಯಪಾಲರಿಂದ ಹೇಳಿಸಿದ್ದಾರೆ. ಬಜೆಟ್ ಕೂಡ ಸುಳ್ಳಿನಿಂದ ಕೂಡಿದೆ. ನಿನ್ನೆ ಪರಿಷತ್ತಿನಲ್ಲಿ ಸಿದ್ದರಾಮಯ್ಯ ಅವರು ನಾನು ಹೇಳುವುದೆಲ್ಲಾ ಸತ್ಯ ಅಂದಿದ್ದಾರೆ. ನೂರು ಬಾರಿ ಸುಳ್ಳು ಹೇಳಿ, ಸತ್ಯ ಮಾಡ್ತೀವಿ ಅಂತಾರೆ. ಹಾಗೆ ಮಾಡಿದ್ದಾರೆ ಎಂದು ಛೇಡಿಸಿದರು.

ಬಜೆಟ್​ನಲ್ಲಿ ಯಾವುದೇ ಹೊಸ ವಿಚಾರ ಇಲ್ಲ

ಪ್ರತಿ ವಿಷಯದಲ್ಲೂ, ನೀರಾವರಿ ವಿಚಾರದಲ್ಲಿ ಕೇಂದ್ರದ ಮುಂದೆ ಹೋಗ್ತೀವಿ ಅಂತಾರೆ. ಅಭಿವೃದ್ಧಿ ವಿಚಾರಕ್ಕೂ ಕೇಂದ್ರದ ಮುಂದೆ ಹೋಗ್ತೀವಿ ಅಂತಾರೆ. ಬಜೆಟ್‌ನಲ್ಲಿ ಗಮನಿಸಿರೋ ಅಂಶ, ಕಳೆದ ಮೂರು ವರ್ಷದ ಬಿಜೆಪಿ ಆಡಳಿತದಲ್ಲಿ ಯಾವ ಯೋಜನೆ ಹಾಕಿದ್ರು. ಅದೇ ಯೋಜನೆಯನ್ನೇ ಉಲ್ಲೇಖ ಮಾಡಿದ್ದಾರೆ. ಇವರ ಬಜೆಟ್​ನಲ್ಲಿ ಯಾವುದೇ ಹೊಸ ವಿಚಾರ, ಅಭಿವೃದ್ಧಿ ಯಾವುದೂ ಇಲ್ಲ. ಹಿಂದಿನ ಸರ್ಕಾರದ ಕಾರ್ಯಕ್ರಮ ಹೇಳಿಕೊಂಡಿದ್ದಾರೆ ವಿನಃ, ಯಾವುದೇ ಹೊಸ ವಿಚಾರ ಇಲ್ಲ ಎಂದು ಚಾಟಿ ಬೀಸಿದರು.

RELATED ARTICLES

Related Articles

TRENDING ARTICLES