Sunday, December 22, 2024

ಸಾಲ ಮಾಡಿದ್ದೇ ಸಿದ್ದರಾಮಯ್ಯ ಬಜೆಟ್ ದಾಖಲೆ: ಬೊಮ್ಮಾಯಿ

ಬೆಂಗಳೂರು: 15 ಬಾರಿ ಬಜೆಟ್ ಮಂಡಿಸಿ 1.5 ಲಕ್ಷ ಕೋಟಿ ಸಾಲ ಮಾಡಿರುವ ದಾಖಲೆ ಸೃಷ್ಟಿಸಿರುವ ಸಿದ್ದರಾಮಯ್ಯ ಅವರು ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಸುಳ್ಳಿನ ಕಂತೆಯ ರಾಜಕೀಯ ಬಜೆಟ್ ಮಂಡಿಸಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಬಜೆಟ್ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಕೇಂದ್ರ ಸರ್ಕಾರವನ್ನು ವಿರೋಧಿಸಲು ಬಜೆಟ್‌ ಅನ್ನು ಬಳಸಿಕೊಂಡಿದ್ದು, ಬಜೆಟ್‌ನ ಪಾವಿತ್ರ್ಯತೆಯನ್ನು ಸಿದ್ದರಾಮಯ್ಯ ಹಾಳು ಮಾಡಿದ್ದಾರೆ. ಕೇಂದ್ರ ಸರ್ಕಾರದ ಅನುದಾನ‌ ಪಡೆಯಲು ಅನೇಕ ವೇದಿಕೆಗಳಿವೆ. ಜಿಎಸ್‌ಟಿ ಕೌನ್ಸಿಲ್, ನೀತಿ ಆಯೋಗ ಇದೆ.

ಒಂದು ಬಾರಿಯೂ ನೀತಿ ಆಯೋಗದ ಸಭೆಗೆ ಹಾಜರಾಗದೇ ಆ ಸಂದರ್ಭದಲ್ಲಿ ಮಾತನಾಡದೇ ಬಜೆಟ್‌ನಲ್ಲಿ ಕೇಂದ್ರ ಸರ್ಕಾರವನ್ನು ವಿರೋಧಿಸಿರುವುದು, ರಾಜಕೀಯಕ್ಕಾಗಿ ಬಜೆಟ್ ಬಳಸಿಕೊಂಡಿರುವುದು ಖಂಡನೀಯ ಎಂದು ಹೇಳಿದರು.

RELATED ARTICLES

Related Articles

TRENDING ARTICLES