Monday, December 23, 2024

ಪಟಾಕಿ ಕಾರ್ಖಾನೆ ಸ್ಫೋಟ; 9 ಮಂದಿ ಸಾವು

ಚೆನ್ನೈ: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟಗೊಂಡು ಒಟ್ಟು 9 ಮಂದಿ ಸಾವನ್ನಪ್ಪಿರೋ ದಾರುಣ ಘಟನೆ ತಮಿಳುನಾಡಿನ ವೆಂಬಕೊಟ್ಟೈ ಎಂಬಲ್ಲಿ ನಡೆದಿದೆ. ಪಟಾಕಿ ದುರಂತದಲ್ಲಿ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ ಗಾಯಗಳಾಗಿವೆ.

ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. 9 ಮಂದಿಯ ಮೃತದೇಹವನ್ನು ಹೊರತೆಗೆಯಲಾಗಿದ್ದು, ಪಟಾಕಿ ಅವಘಡದಲ್ಲಿ ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಖಾಸಗಿ ಪಟಾಕಿ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

RELATED ARTICLES

Related Articles

TRENDING ARTICLES