Sunday, May 12, 2024

ಬಿಬಿಎಂಪಿ ವ್ಯಾಪ್ತಿಯಲ್ಲಿ ಕನ್ನಡ ಬಳಸದ ಮಳಿಗೆಗೆಗಳಿಗೆ ಬೀಗ ಹಾಕಿದ ಅಧಿಕಾರಿಗಳು!

ಬೆಂಗಳೂರು: ಅಂಗಡಿಗಳ ನಾಮಫಲಕಗಳಲ್ಲಿ ಕನ್ನಡಕ್ಕೆ ಶೇ.60 ಪ್ರಶಸ್ತ್ಯ ನೀಡಲೇಬೇಕು ಎನ್ನಬೇಕು ಎನ್ನುವ ನಿಯಮವಿದ್ದರೂ ನಗರದಲ್ಲಿರುವ ಮಳಿಗೆಗಳ ನಾಮಫಲಕದಲ್ಲಿ ಶೇ 60ರಷ್ಟು ಕನ್ನಡ ಬಳಸದ 18 ಉದ್ದಿಮೆಗಳನ್ನು ತಾತ್ಕಾಲಿಕವಾಗಿ ಬಿಬಿಎಂಪಿ ವತಿಯಿಂದ ಮುಚ್ಚಿಸಿದೆ.

ಇದನ್ನೂ ಓದಿ: ಲೋಕಸಭಾ ಚುನಾವಣೆ: ಮೈಸೂರು ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಡಾಲಿ ಧನಂಜಯ ಕಣಕ್ಕೆ!

ಬ್ರಿಗೇಡ್ ರಸ್ತೆ, ಎಂ.ಜಿ ರಸ್ತೆ ಹಾಗೂ ಚರ್ಚ್ ಸ್ಟ್ರೀಟ್‌ಗಳಲ್ಲಿ ಕನ್ನಡ ನಾಮಫಲಕ ಬಳಸದ ಅಂಗಡಿಗಳಿಗೆ ಬಿಬಿಎಂಪಿ ಪೂರ್ವ ವಲಯದ ಸಿಬ್ಬಂದಿ ಎಚ್ಚರಿಕೆ ನೀಡಿದರು. ಈಗಿರುವ ನಾಮಫಲಕಗಳಲ್ಲಿ ಇಂಗ್ಲಿಷ್ ಅಕ್ಷರಗಳನ್ನು ಮುಚ್ಚಿ. ಕನ್ನಡವನ್ನು ಚಿಕ್ಕದಾಗಿ ಕಾಣುವಂತೆ ಮಾಡಿದ್ದಾರೆ. ಇದು ಸರಿಯಲ್ಲ. ಶೇ 60ರಷ್ಟು ಕನ್ನಡ ಇರಲೇಬೇಕು ಎಂದು ಮಳಿಗೆಯವರಿಗೆ ತಾಕೀತು ಮಾಡಿದರು.

 

ನಗರದ ಎಂ.ಜಿ ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್ ಮತ್ತು ರೆಸಿಡೆನ್ಸಿ ರಸ್ತೆಯಲ್ಲಿ ಇದುವರೆಗೆ 200ಕ್ಕೂ ಹೆಚ್ಚು ವಾಣಿಜ್ಯ ಮಳಿಗಳನ್ನು ವಲಯ ಆಯುಕ್ತ ಸ್ನೇಹಲ್, ವಲಯ ಜಂಟಿ ಆಯುಕ್ತ ಪಲ್ಲವಿ ಅವರ ನಿರ್ದೇಶನದಂತೆ ಶಾಂತಿನಗರ ಹಾಗೂ ಸಿ.ವಿ ರಾಮನ್‌ನಗರ ವ್ಯಾಪ್ತಿಯಲ್ಲಿ ವಲಯ ಆರೋಗ್ಯಾಧಿಕಾರಿ ಡಾ. ಸವಿತಾ ನೇತೃತ್ವದಲ್ಲಿ ಮಳಿಗೆಗಳ ನಾಮಫಲಕಗಳನ್ನು ಪರಿಶೀಲಿಸಲಾಗಿದೆ. ಈ ಪೈಕಿ 170ಕ್ಕೂ ಹೆಚ್ಚು ಮಳಿಗೆಗಳಲ್ಲಿ ಈಗಾಗಲೇ ಕನ್ನಡ ನಾಮಫಲಕಗಳನ್ನು ಅಳವಡಿಸಿಕೊಂಡಿರುತ್ತಾರೆ. ಇನ್ನು ಕನ್ನಡ ನಾಮಫಲಕ ಅಳವಡಿಸದೇ ಇರುವ ಮಳಿಗೆಗಳ ಮಾಲೀಕರಿಗೆ ಅಂತಿಮ ತಿಳಿವಳಿಕೆ ಪತ್ರ ನೀಡಿ ಕೂಡಲೇ ನಾಮಫಲಕ ಬದಲಾಯಿಸಿಕೊಳ್ಳಲು ಸೂಚನೆ ನೀಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

RELATED ARTICLES

Related Articles

TRENDING ARTICLES