Monday, December 16, 2024

ಲೋಕಸಭೆಯಲ್ಲಿ 27 ಸ್ಥಾನಗಳಲ್ಲಿ ಬಿಜೆಪಿ ಗೆಲುವು: ಮಾಜಿ ಸಿಎಂ ಜಗದೀಶ್​ ಶೆಟ್ಟರ್​

ಮೈಸೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ 27 ಸ್ಥಾನಗಳಲ್ಲಿ ಬಿಜೆಪಿ ಗೆಲುವು ಪಡೆಯಲಿದೆ. ಜೊತೆಗೆ ಬಿಜೆಪಿ ಮತ್ತೆ ಬಹುಮತ ಪಡೆದು ಪ್ರಧಾನಿ ಮೋದಿರವರು ಮತ್ತೊಮ್ಮೆ ಪ್ರಧಾನ ಮಂತ್ರಿಯಾಗುವುದು ನಿಶ್ಚಿತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು.

ಇದನ್ನೂ ಓದಿ: ವೀರಶೈವ ಲಿಂಗಾಯದ ಅಭಿವೃದ್ದಿ ನಿಗಮದ ಅಧ್ಯಕ್ಷರಾಗಿ ವಿ. ಕಾಶಪ್ಪನವರ್​ ನೇಮಕ!

ಮೈಸೂರಿನಲ್ಲಿ ಮಾತನಾಡಿದ ಅವರು, ಕಳೆದ 10 ವರ್ಷಗಳಲ್ಲಿ ಪ್ರಧಾನಿ ಮೋದಿ ಅವರು ಬಡವರಿಗಾಗಿ ಹಲವಾರು ವಿಶೇಷ ಯೋಜನೆಗಳನ್ನು ಜಾರಿಗೊಳಿಸಿ ಯಶಸ್ವಿ ಸರ್ಕಾರವನ್ನು ನಡೆಸಿದ್ದಾರೆ.
ಆದ್ದರಿಂದ ಪ್ರಧಾನಿ ಮೋದಿರವರು ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂಬುದು ದೇಶದ ಕೋಟ್ಯಂತರ ಜನರ ಆಶಯವಾಗಿದೆ. ಈ ನಿಟ್ಟಿನಲ್ಲಿ ಮೋದಿರವರ ಕೈ ಬಲಪಡಿಸುವ ಸಲುವಾಗಿ ನಾವೆಲ್ಲಾ ಕೆಲಸ ಮಾಡುತ್ತಿದ್ದೇವೆ.

ರಾಜ್ಯದಲ್ಲಿ ಕಳೆದ ಬಾರಿ 25 ಲೋಕಸಭಾ ಸ್ಥಾನಗಳನ್ನು ಬಿಜೆಪಿ ಗೆದ್ದುಕೊಂಡಿತ್ತು. ಈ ಬಾರಿ ಖಾಸಗಿ ಸಮೀಕ್ಷೆಯಲ್ಲಿಯೂ 22 ಸ್ಥಾನಗಳಲ್ಲಿ ಬಿಜೆಪಿ ಗೆಲುವು ಪಡೆಯಲಿದೆ ಎಂಬ ವರದಿ ಬಂದಿದೆ. ಈ ಬಾರಿ ಕಳೆದ ಬಾರಿಗಿಂತ 2 ಸ್ಥಾನಗಳನ್ನು ಹೆಚ್ಚಾಗಿ ಗೆಲ್ಲುವ ವಾತಾವರಣವಿದ್ದು, 27 ಸ್ಥಾನಗಳಲ್ಲಿ ಬಿಜೆಪಿ ಗೆಲುವು ಪಡೆಯುವುದು ಖಚಿತವಾಗಿದೆ ಎಂದು ಅವರು ಹೇಳಿದರು.

RELATED ARTICLES

Related Articles

TRENDING ARTICLES