Wednesday, April 2, 2025

ಬಿಜೆಪಿ, ಜೆಡಿಎಸ್​ಗೆ ಒಂದು ವೋಟು ಕೂಡ ಹಾಕಬೇಡಿ : ಸಿದ್ದರಾಮಯ್ಯ

ಮಂಡ್ಯ : ಅಶೋಕ್, ಬೊಮ್ಮಾಯಿ ಬಜೆಟ್ ಪುಸ್ತಕ ಓದಿಕೊಳ್ಳಪ್ಪ. ಸುಖಾ ಸುಮ್ಮನೇ ಬಜೆಟ್ ಬಗ್ಗೆ ಟೀಕೆ ಮಾಡಬೇಡಿ. ಸಂಪೂರ್ಣ 5 ಗ್ಯಾರಂಟಿಗಳನ್ನ ಜಾರಿ ಮಾಡಿದ್ರೆ ಅದು ಕಾಂಗ್ರೆಸ್‌ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು.

ಮಂಡ್ಯದ ಮಳವಳ್ಳಿಯಲ್ಲಿ ನಡೆದ ‘ಗ್ಯಾರಂಟಿ’ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಮ್ಮ ಗ್ಯಾರಂಟಿಗಳನ್ನ ಜಾರಿಗೆ ತಂದ್ರೆ ರಾಜ್ಯ ದಿವಾಳಿ ಆಗುತ್ತೆ, ವಿಫಲವಾಗುತ್ತೆ ಅಂದ್ರು. ಮೊನ್ನೆ ಬಜೆಟ್ ಮಂಡಿಸಿದ್ದೇನೆ. ಆ ಬಜೆಟ್​ನಲ್ಲಿ 52 ಸಾವಿರ ಕೋಟಿ ರೂ. ಅನುದಾನ ಮೀಸಲಿಟ್ಟಿದ್ದೀನಿ ಎಂದು ಹೇಳಿದರು.

ಬಿಜೆಪಿ, ಕುಮಾರಸ್ವಾಮಿ ಮಾಡಿದ್ರ?

ಕಳೆದ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ಶ್ರಮಿಸಿದ್ದೆವು. ಅದಕ್ಕೆ 136 ಸೀಟ್ ಗೆದ್ದು ಅಧಿಕಾರಕ್ಕೆ ಬಂದಿದ್ದೇವೆ. ಈಗ ಬಿಜೆಪಿ ಹಾಗೂ ಜೆಡಿಎಸ್‌ ಡೋಂಗಿಗಳ ತರ ಹೇಳ್ತಾವೆ. ಕಾಂಗ್ರೆಸ್‌ ಈ ಸಲ ಕನಿಷ್ಠ 20 ಸ್ಥಾನ ಗೆದ್ದು ಲೋಕಸಭೆಗೆ ಕಳಿಸುತ್ತೇವೆ. ಉಪಕಾರ ಮಾಡಿದವರನ್ನ ಮರೆಯುತ್ತೀರ? 155 ಕೋಟಿ ಹೆಣ್ಣು ಮಕ್ಕಳು ಇವತ್ತು ಉಚಿತವಾಗಿ ಬಸ್ಸಿನಲ್ಲಿ ಓಡಾಡ್ತಿದ್ದಾರೆ. ಹಿಂದೆ ಯಾರಾದ್ರೂ ಮಾಡಿದ್ರ? ಬಿಜೆಪಿ, ಕುಮಾರಸ್ವಾಮಿ, ದೇವೇಗೌಡರು ಮಾಡಿದ್ರ? ಇದನ್ನ ಸಿದ್ದರಾಮಯ್ಯ ಸರ್ಕಾರ ಮಾಡಿದ್ದು ಅನ್ನೋದನ್ನ ಮರೆಯಬೇಡಿ ಎಂದು ಗುಡುಗಿದರು.

ಒಂದು ವೋಟು ಕೂಡ ಕೊಡಬಾರದು

ಇವತ್ತು ಕುಮಾರಸ್ವಾಮಿ, ಅಶೋಕ ಒಂದಾಗಿದ್ದಾರೆ. ಯಾರು ಹಸಿದು ಮಲಗಬಾರದು ಅಂತಾ ಅನ್ನಭಾಗ್ಯ ಅಕ್ಕಿ ಕೊಟ್ಟವರು ಯಾರು? ಕೇಂದ್ರದ ಅಸಹಕಾರದ ನಡುವೆಯೂ ಯೋಜನೆ ಅನುಷ್ಠಾನ ಮಾಡಿದ್ದೇವೆ. ಬಡವರಿಗೆ ಅಕ್ಕಿ ಕೊಡದ ಬಿಜೆಪಿ, ಜೆಡಿಎಸ್‌ಗೆ ಮತ ಕೊಡಬೇಡಿ. ಒಂದು ವೋಟು ಕೂಡ ಕೊಡಬಾರದು ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

RELATED ARTICLES

Related Articles

TRENDING ARTICLES