Thursday, December 26, 2024

ದಿನ ಭವಿಷ್ಯ: ಇಂದಿನ ತ್ರಿಗ್ರಾಹಿ ಯೋಗದಿಂದಾಗಿ ಯಾರಿಗೆ ಶುಭ..? ಯಾರಿಗೆ ಅಶುಭ..?

2024 ಫೆಬ್ರವರಿ 18ರ ಭಾನುವಾರವಾದ ಇಂದು, ವೃಷಭ ರಾಶಿಯ ನಂತರ ಚಂದ್ರನು ಮಿಥುನ ರಾಶಿಗೆ ಚಲಿಸಲಿದ್ದಾನೆ. ಅಲ್ಲದೆ ಇಂದು ಮಾಘ ಮಾಸದ ಶುಕ್ಲ ಪಕ್ಷದ ಒಂಬತ್ತನೇ ದಿನವಾಗಿದ್ದು ಈ ದಿನ ರವಿ ಯೋಗ, ಲಕ್ಷ್ಮೀ ನಾರಾಯಣ ಯೋಗ, ತ್ರಿಗ್ರಾಹಿ ಯೋಗ ಮತ್ತು ರೋಹಿಣಿ ನಕ್ಷತ್ರದ ಶುಭ ಸಂಯೋಗ ನಡೆಯುತ್ತಿದೆ. ಗ್ರಹಗಳ ಸ್ಥಾನ ಬದಲಾವಣೆಯಿಂದ ಮೇಷದಿಂದ ಮೀನ ರಾಶಿವರೆಗಿನ ಎಲ್ಲಾ ರಾಶಿಯವರಿಗೆ ಇಂದಿನ ರಾಶಿ ಭವಿಷ್ಯ ಹೇಗಿರಲಿದೆ? ಯಾವ ರಾಶಿಯವರಿಗೆ ಅದೃಷ್ಟ? ಯಾವ ರಾಶಿಯವರು ಎಚ್ಚರದಿಂದಿರಬೇಕು ಎನ್ನುವುದನ್ನು ತಿಳಿದುಕೊಳ್ಳಿ.

ಮೇಷ: ಹಣಕಾಸು ಪ್ರಗತಿಯಲ್ಲಿ ಸಾಧಾರಣವಾಗಿರಲಿದೆ. ಹೊಸದೊಂದು ವಸ್ತು ಖರೀದಿಯಿಂದ ಸಂತೋಷವಾಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಉದ್ಯೋಗದಲ್ಲಿ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.

ವೃಷಭ: ಶಾಂತ ಮನಸ್ಥಿತಿಯು ಉತ್ಸಾಹ ತುಂಬಿ ಕಾರ್ಯದಲ್ಲಿ ಯಶಸ್ಸು ಸಿಗುವುದು. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಪ್ರೀತಿ- ಪಾತ್ರರಿಂದ ಕಿರಿಕಿರಿ ಸಾಧ್ಯತೆ ಇದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಕಾಣಲಿದೆ. ದಿನದ ಕೊನೆಯಲ್ಲಿ ಯಾವುದಾದರೂ ಸುದ್ದಿ ದುಃಖ ತರುವುದು. ಕೌಟುಂಬಿಕವಾಗಿ ಮಿಶ್ರ ಫಲ.

ಮಿಥುನ: ಜೀವನದಲ್ಲಿ ಅಭದ್ರತೆಯೊಂದಿಗೆ ಮಾನಸಿಕ ಒತ್ತಡ ಉಂಟುಮಾಡುವ ಸಾಧ್ಯತೆ ಇದೆ. ಹೂಡಿಕೆಗೆ ಸಂಬಂಧಿಸಿದ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕಛೇರಿ ಕೆಲಸಗಳು ನಿಧಾನವಾಗಿ ಸಾಗುವುದು. ಕುಟುಂಬ ಸದಸ್ಯರ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.

ಇದನ್ನೂ ಓದಿ: 58ನೇ ಜ್ಞಾನಪೀಠ ಪ್ರಶಸ್ತಿ ಪ್ರಕಟ: ಕವಿ ಗುಲ್ಜಾರ್ ಹಾಗು ರಾಮಭದ್ರಾಚಾರ್ಯಗೆ ಪ್ರಶಸ್ತಿ!

ಕಟಕ: ಬಿಡುವಿಲ್ಲದ ಕೆಲಸದಿಂದ ಆಯಾಸ ಆಗಲಿದೆ. ಕುಟುಂಬದ ಸಂತಸ ಹೆಚ್ಚಿಸಲು ಪ್ರಯತ್ನ ಮಾಡುವಿರಿ. ಸಭೆ-ಸಮಾರಂಭಗಳಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಸ್ವಲ್ಪ ಖರ್ಚಿನ ದಿನವಿದು. ಬಹುದಿನಗಳ ಕನಸು ನನಸಾಗುವ ಸಮಯವಿದು. ಕೌಟುಂಬಿಕವಾಗಿ ಶುಭ ಫಲ.

ಸಿಂಹ: ಆಪ್ತರು ನಿಮ್ಮ ತಾಳ್ಮೆ ಪರೀಕ್ಷಿಸುವವರು. ಯಾವುದೇ ವಿಷಯಗಳಲ್ಲಿ ದೃಢ ನಿರ್ಧಾರ, ರಾಜಿಯಾಗದ ಗುಣ ಇರಲಿದೆ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ದಿನದ ಮಧ್ಯಭಾಗದಲ್ಲಿ ಸ್ವಲ್ಪ ಮನೋ ಒತ್ತಡ ಇರಲಿದೆ. ಉದ್ಯೋಗ ಆರೋಗ್ಯದಲ್ಲಿ ಉತ್ತಮ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.

ಕನ್ಯಾ: ಆಪ್ತರೊಂದಿಗೆ ಅನೇಕ ವಿಚಾರಗಳನ್ನು ಹಂಚಿಕೊಳ್ಳುವಿರಿ. ಅತಿಯಾದ ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ. ಹಣಕಾಸು ಪ್ರಗತಿ ಸಾಧಾರಣವಾಗಿರಲಿದೆ. ಉದ್ಯೋಗದ ಸ್ಥಳದಲ್ಲಿ ಪ್ರಶಂಸೆ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.

ತುಲಾ: ಆರೋಗ್ಯ ಉತ್ತಮವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಸಾಧ್ಯತೆ ಇದೆ. ಕುಟುಂಬ ಸದಸ್ಯರ ಮಧ್ಯೆ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ ಇದೆ. ನಿಮ್ಮ ಹಿಂದೆ ಪಿತೂರಿ ಮಾಡುವ ಜನರ ಬಗ್ಗೆ ಎಚ್ಚರಿಕೆ ಇರಲಿ. ಕೌಟುಂಬಿಕವಾಗಿ ಸಾಧಾರಣ ಫಲ.

ವೃಶ್ಚಿಕ: ಆಹಾರದ ವ್ಯತ್ಯಾಸದಿಂದ ಆರೋಗ್ಯ ಹದಗೆಡುವ ಸಾಧ್ಯತೆ ಇದೆ. ಆಪ್ತರೊಂದಿಗಿನ ಮಾತುಕತೆಯಲ್ಲಿ ವ್ಯತಿರಿಕ್ತವಾದ ಪರಿಣಾಮದಿಂದಾಗಿ ಜಗಳವಾಗುವ ಸಾಧ್ಯತೆ, ಆದಷ್ಟು ಮಾತು ನಿಯಂತ್ರಣದಲ್ಲಿರಲಿ. ಇದರ ಮಧ್ಯೆ ಉದ್ಯೋಗದ ಸ್ಥಳದಲ್ಲಿ ಕೌಶಲ್ಯದ ಕೆಲಸ ನಿಮಗೆ ಯಶಸ್ಸು ತಂದು ಕೊಡುವುದು. ಕೌಟುಂಬಿಕವಾಗಿ ಶುಭ ಫಲ.

ಧನಸ್ಸು: ಅತಿಯಾದ ಒತ್ತಡದ ಕಾರ್ಯ ನಿಮ್ಮ ಮನಸ್ಸಿಗೆ ಘಾಸಿ ಮಾಡುವ ಸಾಧ್ಯತೆ ಇದೆ. ಆಪ್ತರೊಂದಿಗೆ ಪ್ರಯಾಣ ಮಾಡುವ ವಿಚಾರಕ್ಕೆ ಕುಟುಂಬ ಸದಸ್ಯರ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.

ಮಕರ: ಈ ಹಿಂದೆ ಮಾಡಿದ ಹೂಡಿಕೆ ವ್ಯವಹಾರವು ಇಮ್ಮಡಿ ಲಾಭ ತರುವ ಸಾಧ್ಯತೆಗಳು ಹೆಚ್ಚಿದೆ. ಅನಗತ್ಯವಾಗಿ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.

ಕುಂಭ: ಆರೋಗ್ಯದ ಕಡೆಗೆ ಕಾಳಜಿ ವಹಿಸುವುದು ಅಗತ್ಯ. ಅಧಿಕ ರಕ್ತದೊತ್ತಡ ಹಾಗೂ ಸಕ್ಕರೆ ಕಾಯಿಲೆ ಇರುವವರು ಹೆಚ್ಚು ಆರೋಗ್ಯದ ಕಡೆಗೆ ಕಾಳಜಿ ವಹಿಸಬೇಕು. ವ್ಯಾಪಾರದಲ್ಲಿ ಪ್ರಗತಿ ಇರಲಿದೆ. ಹೊಸದಾಗಿ ಕಾರ್ಯ ಪ್ರಾರಂಭಿಸುವುದು ದಿನದ ಮಟ್ಟಿಗೆ ಬೇಡ. ಜೀವನದ ಭವಿಷ್ಯದ ಬಗೆಗೆ ಅತಿಯಾಗಿ ಚಿಂತಿಸಿ ಮನಸ್ಥಿತಿಯನ್ನು ಹಾಳು ಮಾಡಿಕೊಳ್ಳುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.

ಮೀನ: ಕುಟುಂಬ ಸದಸ್ಯರೊಂದಿಗೆ ಭಿನ್ನಾಭಿಪ್ರಾಯದಿಂದ ಮಾನಸಿಕ ಅಸಮತೋಲನ ಉಂಟಾಗಬಹುದು. ನಡೆದು ಹೋದ ಘಟನೆಗಳ ಬಗ್ಗೆ ಚಿಂತಿಸಿ ಫಲವಿಲ್ಲ. ಅತಿಥಿಗಳ ಆಗಮನ ಹರ್ಷ ತರುವುದು. ಉದ್ಯೋಗ ಸಾಧಾರಣವಾಗಿರಲಿದೆ. ಕೌಟುಂಬಿಕ ವ್ಯಾಜ್ಯಗಳು ಹುಟ್ಟುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ.

RELATED ARTICLES

Related Articles

TRENDING ARTICLES