ಬೆಂಗಳೂರು : ರಾತ್ರಿ ಪಾಳಯದ ಕೆಲಸಗಾರರ ಜೊತೆಗೆ ಹೊಟೇಲ್ ಮಾಲೀಕರಿಗೆ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಬಜೆಟ್ ನಲ್ಲಿ ವ್ಯಾಪಾರ, ವಾಣಿಜ್ಯ ಅಭಿವೃದ್ಧಿ ಉದ್ದೇಶದಿಂದ ತಡರಾತ್ರಿ 1 ಗಂಟೆ ತನಕ ಹೊಟೇಲ್ ಓಪನ್ ಗೆ ಅವಕಾಶ ನೀಡಿರೋದಕ್ಕೆ ಹೊಟೇಲ್ ಮಾಲೀಕರು, ಗ್ರಾಹಕರು ಖುಷ್ ಆಗಿದ್ದಾರೆ. ಆದರೆ ಈಗ 24 ಗಂಟೆ ವ್ಯಾಪಾರ ಅನುಮತಿಗೆ ಆಗ್ರಹ ಕೇಳಿ ಬಂದಿದೆ.
ಇದನ್ನೂ ಓದಿ: ವೀರಶೈವ ಲಿಂಗಾಯದ ಅಭಿವೃದ್ದಿ ನಿಗಮದ ಅಧ್ಯಕ್ಷರಾಗಿ ವಿ. ಕಾಶಪ್ಪನವರ್ ನೇಮಕ!
ರಾಜ್ಯದಲ್ಲಿ ತಡರಾತ್ರಿ 1 ಗಂಟೆ ತನಕ ವ್ಯಾಪಾರ, ವಹಿವಾಟಿಗೆ ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ಟಿದೆ. ವ್ಯಾಪಾರ, ವಾಣಿಜ್ಯ ಅಭಿವೃದ್ಧಿಗೆ ಸರ್ಕಾರ ತೆಗೆದುಕೊಂಡಿರೋ ಪ್ಲಾನ್ ಗೆ ಸಿಲಿಕಾನ್ ಸಿಟಿ ಮಂದಿ ಫುಲ್ ಖುಷ್ ಆಗಿದ್ದಾರೆ. ಮೊದಲೆಲ್ಲ ರಾತ್ರಿ 10 ,11 ಗಂಟೆಗೆ ಹೊಟೇಲ್ ಬಂದ್ ಆಗ್ತಿದ್ದರಿಂದ ಪರದಾಡ್ತಿದ್ದ ಜನರು, ಇದೀಗ 1 ಗಂಟೆ ತನಕ ಅವಕಾಶ ಕೊಟ್ಟಿರೋದಕ್ಕೆ ಸಂತಸ ವ್ಯಕ್ತಪಡಿಸ್ತಿದ್ದಾರೆ.
ಇನ್ನು ಈ ಹಿಂದೆ 24 ಗಂಟೆಗಳ ಕಾಲ ವ್ಯಾಪಾರಕ್ಕೆ ಅವಕಾಶ ಕೋರಿ ಹೊಟೇಲ್ ಮಾಲೀಕರು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಆದರೇ ಸರ್ಕಾರ ಮಾತ್ರ ಈ ಮನವಿಗೆ ಪುರಸ್ಕಾರ ಕೊಡದೇ ಇರೋದಕ್ಕೆ ಹೊಟೇಲ್ ಮಾಲೀಕರು ಅಸಮಾಧಾನ ಹೊರಹಾಕುತ್ತಿದ್ದಾರೆ. ಇಡೀ ರಾತ್ರಿ ವ್ಯಾಪಾರಕ್ಕೆ ಅವಕಾಶ ಕೊಟ್ಟರೇ ವಾಣಿಜ್ಯ ಚಟುವಟಿಕೆಗಳ ಅಭಿವೃದ್ಧಿ ಜೊತೆಗೆ ಕ್ರೈಂ ರೇಟ್ ಕೂಡ ಕಡಿಮೆಯಾಗುತ್ತೆ, ಸರ್ಕಾರ ಈ ಬಗ್ಗೆ ಗಮನಹರಿಸಲಿ ಅಂತಾ ಹೊಟೇಲ್ ಮಾಲೀಕರು ಆಗ್ರಹಿಸಿದ್ದಾರೆ.