ಹಾಸನ: ಲೋಕಸಭಾ ಚುನಾವಣೆ ಸಮೀಪದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹಾಸನ ಜಿಲ್ಲಾ ಪ್ರವಾಸ ಕೈಗೊಂಡಿರುವುದು ಅಚ್ಚರಿ ಮೂಡಿಸಿದೆ. ಇಂದು ಒಂದೇ ದಿನ ನಾಲ್ಕು ದೇವಾಲಯಗಳಿಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಭೇಟಿ ನೀಡಲಿದ್ದಾರೆ.
ಇದನ್ನೂ ಓದಿ: ರಶ್ಮಿಕಾ ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ ! ಸಾವಿನಿಂದ ಪಾರಾದ ನಟಿ
ಕಳೆದ ವಾರ ಹಾಸನ ತಾಲೂಕಿನ ಚನ್ನಂಗಿಹಳ್ಳಿ ಗ್ರಾಮದ ಈಶ್ವರ ದೇವಾಲಯ ಪುನರ್ ಪ್ರತಿಷ್ಠಾಪನೆ ಕಾರ್ಯದಲ್ಲಿ ಕುಮಾರಸ್ವಾಮಿ ಭಾಗಿಯಾಗಿದ್ದರು. ಇಂದು ಜಿಲ್ಲೆಯ ಮಾರನಾಯಕನಹಳ್ಳಿ ಗ್ರಾಮದ ವೀರಾಂಜನೇಯಸ್ವಾಮಿ ದೇವಾಲಯದ ಪುನರ್ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಕುಮಾರಸ್ವಾಮಿ ಭಾಗಿಯಾಗಲಿದ್ದಾರೆ. ಬಳಿಕ ಅರಕಲಗೂಡು ತಾಲ್ಲೂಕಿನ ಬಸವನಹಳ್ಳಿ ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗುತ್ತಾರೆ. ನಂತರ ಅರಸೀಕೆರೆ ತಾಲೂಕಿನ ಗೊಲ್ಲರಹಟ್ಟಿ, ಚಗಚಗೆರೆ ಗ್ರಾಮದ ದೇವಾಲಯ ಉದ್ಘಾಟನೆಯಲ್ಲೂ ಭಾಗಿಯಾಗುತ್ತಾರೆ.
ಇನ್ನು ಹಾಸನ ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟು ಕೊಡಬೇಕು, ಇಲ್ಲವೇ ಅಭ್ಯರ್ಥಿ ಬದಲಾವಣೆ ಆಗಬೇಕು ಎಂಬ ಬಿಜೆಪಿ ನಾಯಕರ ಪಟ್ಟು ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಪ್ರವಾಸ ಅಚ್ಚರಿ ಮೂಡಿಸಿದೆ. ಜಿಲ್ಲೆಯ ಸ್ಥಿತಿ ಗತಿ ಅರಿಯಲು ದೇವಾಲಯ ಪ್ರವಾಸದ ಮೂಲಕ ಕುಮಾರಸ್ವಾಮಿ ತಂತ್ರ ರೂಪಿಸಿದ್ದಾರೆ.



Pinco oyun saytında çox sayda bonus var. Mobil tətbiq ilə daha rahat oyna — https://pinkoaz.website.yandexcloud.net/. Pinco online kazino tam lisenziyalıdır.
Pinco oyunlarını dostlarla paylaş.