ಮಂಗಳೂರು: ಬಿಜೆಪಿ ಭದ್ರಕೋಟೆಯಾಗಿರುವ ಮಂಗಳೂರಿನಲ್ಲಿ ಕಾಂಗ್ರೆಸ್ ತನ್ನ ಲೋಕಸಭಾ ಚುನಾವಣೆಯ ರಣಕಹಳೆ ಮೊಳಗಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಬೇಕು ಎಂದು ಜನತೆಗೆ ಮನವಿ ಮಾಡಿದ್ದಾರೆ. ಬಿಜೆಪಿ ಪಕ್ಷ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಮೋದಿ ಮತ್ತು ಅವರ ತಂಡ ಸರ್ವಾಧಿಕಾರಿಗಳಂತೆ ವರ್ತಿಸುತ್ತಾರೆ. ಭವಿಷ್ಯದಲ್ಲಿ ದೇಶದಲ್ಲಿ ಚುನಾವಣೆಗಳು ನಡೆಯಲು ಸಾಧ್ಯವಾಗುವುದಿಲ್ಲ ಎಂದರು.
ಇದನ್ನೂ ಓದಿ: ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 20 ಸ್ಥಾನ ಗೆಲ್ಲಲಿದ್ದೇವೆ : ಮುಖ್ಯ ಮಂತ್ರಿ ವಿಶ್ವಾಸ
ಮೋದಿ ಅವರು ನ್ಯಾಯಾಂಗ, ಮಾಧ್ಯಮ, ಇಡಿ ಮತ್ತು ಐಟಿ ಇಲಾಖೆಗಳ ಮೇಲೆ ಹಿಡಿತ ಸಾಧಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ ಖರ್ಗೆ, ಅವರನ್ನು ಶಕ್ತಿಯುತರನ್ನಾಗಿ ಮಾಡಬೇಡಿ ಎಂದು ಜನರನ್ನು ಕೇಳಿಕೊಂಡರು. ಕಾಂಗ್ರೆಸ್ ಅನ್ನು ಶಕ್ತಿಯುತಗೊಳಿಸಿದರೆ ಮಾತ್ರ ದೇಶ ಪ್ರಗತಿ ಹೊಂದುತ್ತದೆ ಎಂದು ಹೇಳಿದರು.