Wednesday, January 22, 2025

ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮದ ಅಧ್ಯಕ್ಷರಾಗಿ ವಿ. ಕಾಶಪ್ಪನವರ್ ನೇಮಕ!

ಬೆಂಗಳೂರು: ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಶಾಸಕ ವಿಜಯಾನಂದ ಕಾಶಪ್ಪನವರ್‌ ಅವರನ್ನು ನೇಮಕ ಮಾಡಲಾಗಿದ್ದು ಈ ಹಿಂದಿನ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕಗೊಂಡಿದ್ದ ನೇಮಕ ಆದೇಶವನ್ನು ಹಿಂದಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: ದಿನ ಭವಿಷ್ಯ: ಇಂದಿನ ತ್ರಿಗ್ರಾಹಿ ಯೋಗದಿಂದಾಗಿ ಯಾರಿಗೆ ಶುಭ..? ಯಾರಿಗೆ ಅಶುಭ..?

ವಿಜಯಾನಂದ ಕಾಶಪ್ಪನವರ್‌ ಅವರನ್ನು ಕರ್ನಾಟಕ ಕ್ರೀಡಾ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕ ಮಾಡಿರುವುದನ್ನು ರದ್ದುಗೊಳಿಸಿ, ಶಾಸಕರನ್ನು ಮುಂದಿನ ಎರಡು ವರ್ಷಗಳ ಅವಧಿಗೆ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ನೇಮಕ ಮಾಡಿ, ಸಚಿವ ಸಂಪುಟ ದರ್ಜೆಯ ಸ್ಥಾನಮಾನ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ.

ಕಳೆದ ಜನವರಿ 27ರಂದು ರಾಜ್ಯ ಸರ್ಕಾರ, 35 ಶಾಸಕರನ್ನು ನಿಗಮ ಮಂಡಳಿ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶ ಹೊರಡಿಸಿತ್ತು. ಅದರಲ್ಲಿ ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ್‌ ಅವರನ್ನು ಕರ್ನಾಟಕ ಕ್ರೀಡಾ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕ ಮಾಡಿತ್ತು. ಆದರೆ ಕ್ರೀಡಾ ಪ್ರಾಧಿಕಾರದ ಬೈಲಾದಲ್ಲಿ ಇದಕ್ಕೆ ಅವಕಾಶವಿಲ್ಲ. ಕರ್ನಾಟಕ ಕ್ರೀಡಾ ಪ್ರಾಧಿಕಾರದ ಬೈಲಾದ ನಿಯಮದ ಪ್ರಕಾರ ಸಚಿವರೇ ಕ್ರೀಡಾ ಪ್ರಾಧಿಕಾರದ ಅಧ್ಯಕ್ಷರಾಗುತ್ತಾರೆ. ಅಂದರೆ ಈಗ ಕ್ರೀಡಾ ಸಚಿವರಾಗಿರುವ ನಾಗೇಂದ್ರ ಅವರೇ ಅಧ್ಯಕ್ಷರು. ಬೇಕಿದ್ದರೆ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಬಹುದು ಎನ್ನುವ ನಿಯಮವಿದೆ.

RELATED ARTICLES

Related Articles

TRENDING ARTICLES