Wednesday, January 22, 2025

ಮದುವೆ ಮುಗಿಸಿ ಮನೆಗೆ ಹಿಂದಿರುಗುವಾಗ ಮಸಣ ಸೇರಿದ ಯುವಕ

ದೊಡ್ಡಬಳ್ಳಾಪುರ : ಮದುವೆ ಮುಗಿಸಿಕೊಂಡು ಮನೆಗೆ ಹಿಂದಿರುವಾಗ ಅಪಘಾತ ಸಂಭವಿಸಿ ಯುವಕನೊಬ್ಬ ಮಸಣ ಸೇರಿರುವ ಘಟನೆ ನಡೆದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಹೊರವಲಯದ ಮೇಸ್ಟ್ರು ಮನೆ ಕ್ರಾಸ್ ಸಮೀಪ ಈ ದುರ್ಘಟನೆ ಸಂಭವಿಸಿದೆ. ಪವನ್ (26) ಅಪಘಾತದಲ್ಲಿ ಸಾವನ್ನಪ್ಪಿದ ಯುವಕ.

ಮೃತ ಯುವಕ ಹೊಸಕೋಟೆ ತಾಲೂಕಿನ ಇಟ್ಟಸಂದ್ರ ಗ್ರಾಮದ ನಿವಾಸಿ. ಮದುವೆ ಮುಗಿಸಿ ವಾಪಾಸಾಗುವಾಗ ಡಿವೈಡರ್​ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಪವನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಘಟನೆ ಬಗ್ಗೆ ಮಾಹಿತಿ ತಿಳಿದ ಕೂಡಲೇ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇತ್ತ, ಪುತ್ರ ಪವನ್​ನನ್ನ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

RELATED ARTICLES

Related Articles

TRENDING ARTICLES