Thursday, January 23, 2025

ಕೇಜ್ರಿವಾಲ್ ವಿರುದ್ಧ ಪ್ರಕರಣ ದಾಖಲಿಸಿದ ED

ದೆಹಲಿ: ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಬಾರಿ ಸಮನ್ಸ್ ನೀಡಿದರೂ ವಿಚಾರಣೆಗೆ ಹಾಜರಾಗದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರವಾಲ್ ವಿರುದ್ಧ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ: ಮಕ್ಕಳ ಮನಸಲ್ಲೂ ಸಂಘರ್ಷ ಉಂಟು ಮಾಡಿ ರಾಜಕೀಯ ಮಾಡುತ್ತಿದೆ : ಬಸವರಾಜ ಬೊಮ್ಮಾಯಿ

ಕೇಜ್ರವಾಲ್ ಅವರಿಗೆ ನೀಡಲಾದ ಮೊದಲ ಮೂರು ಸಮನ್ಸ್‌ಗಳನ್ನು ಉದ್ದೇಶಪೂರ್ವಕವಾಗಿ ಪಾಲಿಸದ ಆರೋಪದ ಮೇಲೆ ಐಪಿಸಿಯ ಸೆಕ್ಷನ್ 174ರ ಅಡಿಯಲ್ಲಿ ದೂರು ದಾಖಲಿಸಲಾಗಿದೆ. ಕೇಜ್ರವಾಲ್ ಅವರು ಸತತವಾಗಿ ವಿಚಾರಣೆಗೆ ಗೈರಾದ ಬಗ್ಗೆ ನ್ಯಾಯಾಲಯದ ಗಮನಕ್ಕೂ ತರಲಾಗಿದೆ. ಹಾಗಾಗಿ ಕೇಜ್ರವಾಲ್ ಅವರು ಕಾನೂನು ಕ್ರಮಕ್ಕೆ ಅರ್ಹರಾಗಿದ್ದಾರೆ.

ಸಮನ್ಸ್‌ನ ಸಿಂಧುತ್ವದ ಬಗ್ಗೆ ಯಾವುದೇ ಪ್ರಶ್ನೆ ಉದ್ಭವಿಸುವುದಿಲ್ಲ. ಕೇಜ್ರಿವಾಲ್ ಅವರು ಉದ್ದೇಶಪೂರ್ವಕವಾಗಿ ವಿಚಾರಣೆಗೆ ಹಾಜರಾಗದಿರುವುದು ಅಪರಾಧ ಎಂದು ಇ.ಡಿ ಮೂಲಗಳು ತಿಳಿಸಿವೆ.

RELATED ARTICLES

Related Articles

TRENDING ARTICLES