Thursday, December 26, 2024

ಬೆಂಕಿ ದುರಂತ : ಮೃತಪಟ್ಟ ಕುಟುಂಬಕ್ಕೆ 5 ಲಕ್ಷ ಪರಿಹಾರ : ಎಸ್.ಟಿ. ಸೋಮಶೇಖರ್

ಬೆಂಗಳೂರು : ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಮೃತಪಟ್ಟ ಕುಟುಂಬಕ್ಕೆ 5 ಲಕ್ಷಗಳಿಗೆ ರೂ. ಹಾಗೂ ಗಾಯಾಳುಗಳಿಗೆ ಒಂದು ಲಕ್ಷ ರೂ. ಪರಿಹಾರವನ್ನು ನೀಡಲಾಗುವುದು ಎಂದು ಯಶವಂತಪುರ ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್ ಹೇಳಿದರು.

ಕುಂಬಳಗೂಡು ಪೊಲೀಸ್ ಠಾಣಾ ವ್ಯಾಪ್ತಿಯ ರಾಮಸಂದ್ರದಲ್ಲಿ ಪರ್ಫ್ಯೂಮ್ ಗುಜರಿ ಗೋಡೌನ್​ಗೆ ಭೇಟಿ ನೀಡಿ ಸ್ಥಳೀಯ ಪೊಲೀಸರು ಹಾಗೂ ಸ್ಥಳೀಯ ನಿವಾಸಿಗಳಿಂದ ಮಾಹಿತಿ ಪಡೆದರು.

ಮೃತಪಟ್ಟ ಹಾಗೂ ಗಾಯಲಾಗಿದ್ದ  ಕುಟುಂಬದ ಮನೆಗಳಿಗೆ ಭೇಟಿ ನೀಡಿ ವೈಯಕ್ತಿಕವಾಗಿ ಮೃತಪಟ್ಟ ಕುಟುಂಬಕ್ಕೆ ಒಂದು ಲಕ್ಷ ರೂಪಾಯಿ ಹಾಗೂ ಗಾಯಾಳುಗಳ ಕುಟುಂಬಗಳಿಗೆ 50 ಸಾವಿರ ರೂಪಾಯಿಗಳ ಪರಿಹಾರ ಧನವನ್ನು ವಿತರಿಸಿದರು.

ಶೂನ್ಯ ವೇಳೆಯಲ್ಲಿ ನೆರವು ನೀಡುವಂತೆ ಪ್ರಸ್ತಾಪ

ಈ ವೇಳೆ ಮಾತನಾಡಿದ ಅವರು, ಭಾನುವಾರ ಸಂಭವಿಸಿದ ಬೆಂಕಿ ದುರಂತದಲ್ಲಿ ಮೃತಪಟ್ಟ ಕುಟುಂಬ ಹಾಗೂ ಘಟನೆಯಿಂದ ಅನಾಹುತವಾದ ಅಕ್ಕ ಪಕ್ಕದ ಮನೆಗಳ ದುರಸ್ತಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ನೆರವು ನೀಡಲು ಈಗಾಗಲೇ ವಿಧಾನಸಭೆ ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಲಾಗಿದೆ ಎಂದು ಹೇಳಿದರು.

ಸರ್ಕಾರದಿಂದ ಗಾಯಾಳುಗಳ ಸಂಪೂರ್ಣ ವೆಚ್ಚ

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಳಿ ಚರ್ಚಿಸಿ ಆಸ್ಪತ್ರೆಗೆ ದಾಖಲಾಗಿರುವ ಗಾಯಾಳುಗಳ ಸಂಪೂರ್ಣ ವೆಚ್ಚವನ್ನು ಸರ್ಕಾರದಿಂದಲೇ ಭರಿಸುವ ಭರವಸೆಯನ್ನು ನೀಡಿದರು. ಅಲ್ಲದೆ, ಗಾಯಾಳುಗಳಿಗೆ ಒಂದು ಲಕ್ಷ ರೂ. ನೀಡುವಂತೆ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಲಾಗಿದೆ ಎಂದು ಶಾಸಕ ಸೋಮಶೇಖರ್ ತಿಳಿಸಿದರು.

RELATED ARTICLES

Related Articles

TRENDING ARTICLES