ಬೆಂಗಳೂರು : ಯಾವ ಅಧಿಕಾರಿಗಳೂ ಸರ್ಕಾರದ ಮಾತು ಕೇಳುತ್ತಿಲ್ಲ. ಕಾಂಗ್ರೆಸ್ ಸರ್ಕಾರ ಇದೆಯೋ..? ಸತ್ತಿದೆಯೋ..? ಗೊತ್ತಿಲ್ಲ ಎಂದು ವಿಪಕ್ಷದ ನಾಯಕ ಆರ್. ಅಶೋಕ್ ಕಿಡಿಕಾರಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಕ್ಕಳು ಕೈಮುಗಿದು ಒಳಗೆ ಬನ್ನಿ ಅಂತ ಅಂದ್ರೆ ತಪ್ಪೇನು? ಬೇರೆ ದೇಶದ ಪ್ರಧಾನಿಗಳು ನಮ್ಮ ದೇಶಕ್ಕೆ ಬಂದಾಗ ಅವರು ಕೈ ಮುಗಿಯುತ್ತಾರೆ. ಅಂತಹದರಲ್ಲಿ ಕೇಡುಗಾಲ ಬಂದಿರುವ ಈ ಸರ್ಕಾರ, ಆದೇಶ ಇಲ್ಲದೆ ನಾಮಫಲಕ ಬದಲಾಯಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಮಣಿವಣ್ಣನ್ ಪ್ರಧಾನ ಕಾರ್ಯದರ್ಶಿಯಾಗಿ ಬದಲಾವಣೆಯಾಗಿದ್ದಾರೆ. ಹಾಗೆಂದ ಮಾತ್ರಕ್ಕೆ ಪ್ರಪಂಚವೇ ಬದಲಾಗಬೇಕು ಎನ್ನುವ ಮನಸ್ಥಿತಿಯಲ್ಲಿದ್ದಾರೆ. ಕುವೆಂಪು ಅವರ ವಾಕ್ಯ ‘ಜ್ಞಾನ ದೇಗುಲ ಕೈಮುಗಿದು ಒಳಗೆ ಬನ್ನಿ’ ಎನ್ನುವುದು. ಇದು ಭಾರತೀಯ ಸಂಸ್ಕೃತಿ ಮತ್ತು ಪರಂಪರೆ ಎತ್ತಿ ಹಿಡಿಯುವಂಥದ್ದು. ನೀವು ಕನ್ಯಾಕುಮಾರಿಯಿಂದ ಕಾಶ್ಮೀರಕ್ಕೆ ಹೋದ್ರು ಎಲ್ಲಾ ಕಡೆ ಜ್ಞಾನ ದೇಗುಲ ಎಂದು ಹೇಳುತ್ತೇವೆ. ಶಾಲೆ ಕಲಿಯಲು ಒಂದು ದೇವಸ್ಥಾನ ವಿದ್ದಂತೆ. ಇವರು ಧೈರ್ಯದಿಂದ ಪ್ರಶ್ನಿಸಿ ಅಂದ್ರೆ ಪ್ರಶ್ನೆ ಮಾಡೋದು ಎಲ್ಲಿ..? ಎಂದು ಹರಿಹಾಯ್ದರು.
ಈ ಸುದ್ದಿ ಓದಿದ್ದೀರಾ? : ಕುಮಾರಸ್ವಾಮಿ ಯಾರು ಯಾರಿಗೆ ಕಾಲ್ ಮಾಡಿದ್ದಾರೆ, ಧಮ್ಕಿ ಹಾಕ್ತಿದ್ದಾರೆ, ಎಲ್ಲಾ ನನಗೆ ಗೊತ್ತು : ಡಿ.ಕೆ. ಶಿವಕುಮಾರ್
ಇಡೀ ಸರ್ಕಾರ ಇದರ ಹಿಂದೆ ಇದೆ
ಪ್ರಶ್ನೆಯನ್ನು ಶಿಕ್ಷಕರ ಬಳಿ ಮಾಡಬೇಕು. ಯಾವ ಪಾಠ ಅರ್ಥವಾಗಲ್ವೋ ಅಲ್ಲಿ ಪ್ರಶ್ನೆ ಮಾಡಬೇಕು. ಅದನ್ನು ಬಿಟ್ಟು ಕುವೆಂಪು ಅವರ ಈ ವೇದವಾಕ್ಯವನ್ನು ತೆಗೆದುಹಾಕುವಂಥದ್ದು, ಇದು ಕೆಟ್ಟ ಸಂಸ್ಕೃತಿ. ನನಗೆ ಅನಿಸುತ್ತಿದೆ ಇಡೀ ಸರ್ಕಾರ ಇದರ ಹಿಂದೆ ಇದೆ. ಮೊನ್ನೆ ಗಣೇಶನ ಪೂಜೆ ಮಾಡೋ ಹಾಗಿಲ್ಲ, ಸರಸ್ವತಿ ಪೂಜೆ ಮಾಡೋ ಹಾಗಿಲ್ಲ ಅಂತ ಆದೇಶ ಮಾಡಿದ್ರು. ಆ ಮೇಲೆ ಏನಾಯ್ತೋ ವಾಪಸ್ ತೆಗೆದುಕೊಂಡರು, ಈಗ ಮತ್ತೊಂದು ಕಥೆ ಎಂದೆ ಚಾಟಿ ಬೀಸಿದರು.