Saturday, May 4, 2024

49 ಹೊಸ ತಾಲೂಕು ಕಚೇರಿಗಳ ನಿರ್ಮಾಣಕ್ಕೆ ಕ್ರಮ: ಸಚಿವ ಕೃಷ್ಣಭೈರೇಗೌಡ

ಬೆಂಗಳೂರು: ಮುಂದಿನ ಎರಡು ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಹೊಸದಾಗಿ ರಚಿಸಲಾದ ಎಲ್ಲಾ 49 ತಾಲ್ಲೂಕುಗಳಲ್ಲಿ ಆಡಳಿತ ಕಟ್ಟಡಗಳ (ಮಿನಿ ವಿಧಾನಸೌಧ) ನಿರ್ಮಾಣಕ್ಕೆ ಅನುಮತಿ ನೀಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಘೋಷಿಸಿದರು.

ಇದನ್ನೂ ಓದಿ: ಅಮಿತ್ ಶಾ ವಿರುದ್ದ ಹೇಳಿಕೆ ಪ್ರಕರಣ: ರಾಹುಲ್ ಗಾಂಧಿಗೆ ಜಾಮೀನು!

2018ರಲ್ಲಿ 63 ಹೊಸ ತಾಲ್ಲೂಕುಗಳನ್ನು ಘೋಷಣೆ ಮಾಡಲಾಗಿತ್ತು. ಆದರೆ, ಹಿಂದಿನ ಸರ್ಕಾರ 14 ತಾಲ್ಲೂಕುಗಳಲ್ಲಿ ಮಾತ್ರ ಆಡಳಿತ ಭವನ ನಿರ್ಮಾಣಕ್ಕೆ ಅನುಮತಿ ನೀಡಿತ್ತು. ಉಳಿದ 49 ತಾಲ್ಲೂಕುಗಳಿಗೆ ಹೊಸ ಕಟ್ಟಡ ನಿರ್ಮಾಣಕ್ಕೆ ಅನುಮತಿ ಸಿಕ್ಕಿಲ್ಲ. ಹೀಗಾಗಿ ಮುಂದಿನ ಮೂರು ವರ್ಷಗಳಲ್ಲಿ ಈ ಎಲ್ಲ ತಾಲ್ಲೂಕುಗಳಿಗೂ ನೂತನ ಆಡಳಿತ ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡಲಾಗುವುದು ಎಂದು ಭರವಸೆ ನೀಡಿದರು.

ಹೊಸ ತಾಲ್ಲೂಕುಗಳ ಜತೆಗೆ ಹೆಚ್ಚುವರಿಯಾಗಿ 80 ರಿಂದ 100 ತಾಲ್ಲೂಕುಗಳ ಆಡಳಿತ ಕಚೇರಿಗಳ ಕಟ್ಟಡ ದುರಸ್ತಿ ಅಗತ್ಯವಿದ್ದು, ಹೊಸ ಆಡಳಿತ ಕಚೇರಿಗಳ ನಿರ್ಮಾಣಕ್ಕೆ ಆಗ್ರಹ ಕೇಳಿಬಂದಿದೆ. ಹೀಗಾಗಿ, ಅನುದಾನದ ಲಭ್ಯತೆಯನ್ನು ಗಣನೆಗೆ ತೆಗೆದುಕೊಂಡು ಆಡಳಿತಾತ್ಮಕ ಕಟ್ಟಡ ಕಾಮಗಾರಿಗಳಿಗೆ ಆದ್ಯತೆ ಮೇರೆಗೆ ಅನುಮತಿ ನೀಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಸದನಕ್ಕೆ ತಿಳಿಸಿದರು.

RELATED ARTICLES

Related Articles

TRENDING ARTICLES