ಬೆಂಗಳೂರು : ರಾಜ್ಯ ಸರ್ಕಾರ ಕೇರಳದಲ್ಲಿ ಕಾಡಾನೆ ದಾಳಿಗೆ ಒಳಗಾದ ವ್ಯಕ್ತಿಯ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ ನೀಡಿರುವುದು ಭಾರಿ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪ್ರತಿನಿಧಿಸುತ್ತಿರುವ ವಯನಾಡ್ ಕ್ಷೇತ್ರದಲ್ಲಿ ನಡೆದ ದುರಂತಕ್ಕೆ ರಾಜ್ಯ ಸರ್ಕಾರ ಮಿಡಿದಿರುವುದನ್ನು ಬಿಜೆಪಿ ತೀವ್ರವಾಗಿ ಆಕ್ಷೇಪಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಹಿರಿಯ ನಾಯಕ ಸಿ.ಟಿ. ರವಿ ಸೇರಿದಂತೆ ಹಿರಿಯ ನಾಯಕರು ಇದನ್ನು ಪ್ರಶ್ನೆ ಮಾಡಿದ್ದಾರೆ.
ಕರ್ನಾಟಕದ ಆನೆಯ ದಾಳಿಯಿಂದ ಕೇರಳದಲ್ಲಿ ವಯನಾಡು ಜಿಲ್ಲೆಯಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ನೆರವಾಗುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲಹೆ ಮೇರೆಗೆ ಕರ್ನಾಟಕ ಸರ್ಕಾರ, ರಾಜ್ಯದ ತೆರಿಗೆದಾರರ ಹಣವನ್ನು ದುರುಪಯೋಗಪಡಿಸಿಕೊಂಡಿರುವುದು ಸಂಪೂರ್ಣವಾಗಿ ಅವಮಾನಕರ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಇದನ್ನೂ ಓದಿ: ಬೆಳ್ ಬೆಳಗ್ಗೆ ಮೆಟ್ರೋ ಪ್ರಯಾಣಿಕರಿಗೆ ಶಾಕ್: ನೇರಳೆ ಮಾರ್ಗದ ಸಂಚಾರ ಸ್ಥಗಿತ
ಈ ಕುರಿತು ತಮ್ಮ ‘X’ ಖಾತೆಯಲ್ಲಿ ಹೇಳಿಕೆ ನೀಡಿರುವ ಅವರು ರಾಹುಲ್ ಗಾಂಧಿಯವರ ವಯನಾಡ್ ಕ್ಷೇತ್ರದಲ್ಲಿ ಕಾಡಾನೆ ದಾಳಿಗೆ ಮೃತಪಟ್ಟ ವ್ಯಕ್ತಿಗೆ ರಾಜ್ಯ ಸರ್ಕಾರ ತನ್ನ ಬೊಕ್ಕಸದಿಂದ 15 ಲಕ್ಷ ರೂ.ಗಳನ್ನು ಅಕ್ರಮವಾಗಿ ಮಂಜೂರು ಮಾಡಿರುವುದು ರಾಜ್ಯದ ಜನರಿಗೆ ಮಾಡಿದ ದ್ರೋಹವಲ್ಲವೇ ಎಂದು ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ್ದಾರೆ.
ಕರ್ನಾಟಕದಾದ್ಯಂತ ಬರಗಾಲ ಮತ್ತು ನೂರಾರು ರೈತರು ಆತ್ಮಹತ್ಯೆಗೆ ಶರಣಾಗುತ್ತಿರುವ ಈ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ, ಸ್ವಲ್ಪವೂ ನಾಚಿಕೆಯಿಲ್ಲದೆ ರಾಜ್ಯದ ತುರ್ತು ಅಗತ್ಯಗಳತ್ತ ಗಮನಹರಿಸುವ ಬದಲು ರಾಹುಲ್ ಗಾಂಧಿಯವರನ್ನು ಸಂತೋಷಪಡಿಸಲು ಆದ್ಯತೆ ನೀಡುತ್ತಿರುವುದು ಖೇದಕರ. ಕಾಂಗ್ರೆಸ್ ಹೈಕಮಾಂಡ್ ಮೆಚ್ಚಿಸಲು ಕರ್ನಾಟಕದ ತೆರಿಗೆದಾರರ ಹಣವನ್ನು ಅನೈತಿಕವಾಗಿ ಬಳಸಿಕೊಳ್ಳುತ್ತಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಸಚಿವರುಗಳು ಹೊಣೆಹೊರಬೇಕು ಎಂದು ವಿಜಯೇಂದ್ರ ಟೀಕಿಸಿದ್ದಾರೆ.
The @INCKarnataka government’s outrageous misuse of Karnataka taxpayers’ funds to curry favor with Rahul Gandhi is utterly disgraceful.
Illegally allocating state fund of Rs.15 lakh to a deceased individual from @RahulGandhi‘s Wayanad constituency, falsely blaming a elephant… pic.twitter.com/gIFvA5hUSk
— Vijayendra Yediyurappa (@BYVijayendra) February 19, 2024