ಬೆಂಗಳೂರು : ಶಿಕ್ಷಕರ ವಿಭಾಗದ ವಿಧಾನ ಪರಿಷತ್ ಉಪ ಚುನಾವಣೆ ಫಲಿತಾಂಶ ಹೊರ ಬಿದ್ದಿದೆ. ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಭರ್ಜರಿ ಗೆಲುವು ದಾಖಲಿಸಿದರು. ಈ ಹಿಂದೆ ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದು ಬೀಗಿದ್ದರು.
ಬೆಂಗಳೂರು ಶಿಕ್ಷಣ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಗೆ 16ರಂದು ಮತದಾನ ನೆಡದಿತ್ತು. ಶಿಕ್ಷಕರ ಕ್ಷೇತ್ರದಿಂದ ಎಂಎಲ್ಸಿ ಆಗಲು ಒಟ್ಟು 9 ಜನ ಸ್ಪರ್ಧಿಗಳು ಅಂತಿಮ ಕಣದಲ್ಲಿದ್ದು, ಕಾಂಗ್ರೆಸ್ ಪಕ್ಷದಿಂದ ಪುಟ್ಟಣ್ಣ ಮತ್ತು ಬಿಜೆಪಿ ಜೆಡಿಎಸ್ ಮೃತ್ರಿ ಅಭ್ಯರ್ಥಿಯಾಗಿ ಎ.ಪಿ ರಂಗನಾಥ್ ಸ್ಪರ್ಧಿಸಿದ್ದರು.
ಬೆಂಗಳೂರಿನ ಸರ್ಕಾರಿ ಕಲಾ ಕಾಲೇಜಿನಲ್ಲಿ ಈ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯಿತು. ಈ ಹಿಂದೆ ಬಿಜೆಪಿಯಿಂದ ಗೆದ್ದಿದ್ದ ಪುಟ್ಟಣ್ಣ ಅವರು ಈಗ ಮತ್ತೆ ಕಾಂಗ್ರೆಸ್ನಿಂದ ಗೆದ್ದು ಮತ್ತೆ ಜಯಭೇರಿ ಬಾರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮತ ಎಣಿಕೆಯ ಮೂರು ಸುತ್ತಿನಲ್ಲೂ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಮುನ್ನಡೆ ಸಾಧಿಸಿದ್ದು, ಅಂತಿಮವಾಗಿ ಜೆಡಿಎಸ್ ಹಾಗೂ ಬಿಜೆಪಿಯ ಮೈತ್ರಿ ಅಭ್ಯರ್ಥಿ ಎ.ಪಿ ರಂಗನಾಥ್ ವಿರುದ್ಧ 1,507 ಮತಗಳ ಅಂತರದಿಂದ ಜಯ ಗಳಿಸಿದ್ದಾರೆ.
ಬಿಜೆಪಿ–ಜೆಡಿಎಸ್ ಮೈತ್ರಿಗೆ ಮೊದಲ ಸೋಲು
ವಿಧಾನ ಪರಿಷತ್ನ ಉಪಚುಣಾವಣೆಯ ಫಲಿತಾಂಶ ಹೊರ ಬಿಳುತ್ತಿದ್ದಂತೆ ಮತ ಎಣಿಕ ಕೇಂದ್ರದ ಮುಂದೆ ಕಾಂಗ್ರೆಸ್ ಕಾರ್ಯಕರ್ತರು ಅಭಿಮಾನಿಗಳು ಕುಣಿದು ಕುಪ್ಪಳಿಸಿ, ವಿಜಯೋತ್ಸವವನ್ನ ಆಚರಿಸಿದರು. ಇದರೊಂದಿಗೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮೊದಲ ಸೋಲು ಕಂಡಿತು.