ಉತ್ತರ ಪ್ರದೇಶ: ಕೇಂದ್ರ ಗೃಹಸಚಿವ ಅಮಿತ್ ಷಾ ವಿರುದ್ದ ಆಕ್ಷೇಪಾರ್ಹ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಅವರಿಗೆ ಉತ್ತರಪ್ರದೇಶದ ಸುಲ್ತಾನ್ ಪುರ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.
2018 ಮೇ 8 ರಂದು ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಕೇಂದ್ರ ಸಚಿವ ಅಮಿತ್ ಶಾ ವಿರುದ್ದ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದರು ಎಂದು ಆರೋಪಿಸಿ ವಿಜಯ್ ಮಿಶ್ರಾ ಎಂಬುವವರು ಆಗಸ್ಟ್ 4, 2018ರಂದು ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.
ಇದನ್ನೂ ಓದಿ: ಕೇರಳದಲ್ಲಿ ಆನೆ ದಾಳಿಗೆ ಮೃತಪಟ್ಟವರಿಗೆ ಕರ್ನಾಟಕದಿಂದ ಪರಿಹಾರ: ಬಿಜೆಪಿ ಆಕ್ರೋಶ!
ಬಿಜೆಪಿಯು ತಮ್ಮದು ಪ್ರಾಮಾಣಿಕ ಮತ್ತು ಸ್ವಚ್ಛ ರಾಜಕಾರಣದಲ್ಲಿ ನಂಬಿಕೆಯಿಟ್ಟಿರುವ ಪಕ್ಷ ಎಂದು ಹೇಳಿಕೊಳ್ಳುತ್ತದೆ. ಆದರೆ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ವ್ಯಕ್ತಿಯನ್ನು (ಅಮಿತ್ ಶಾ) ಪಕ್ಷದ ಅಧ್ಯಕ್ಷ ಸ್ಥಾನದಲ್ಲಿ ಕೂರಿಸಿದೆ’ ಎಂದು ರಾಹುಲ್ ಗಾಂಧಿ ಆಗ ಹೇಳಿದ್ದರು.
ಭಾರತ್ ಜೋಡೊ ನ್ಯಾಯ ಯಾತ್ರೆಯಲ್ಲಿ ನಿರತರಾಗಿದ್ದರಿಂದ ಜ.18ರಂದು ನಡೆದ ವಿಚಾರಣೆಯಲ್ಲಿ ರಾಹುಲ್ ಗಾಂಧಿ ಹಾಜರಾಗಿರಲಿಲ್ಲ. ಬಿಜೆಪಿ ಅತಿದೊಡ್ಡ ಪಕ್ಷವಾಗಿದ್ದು, ಪಕ್ಷದ ಪ್ರಮುಖ ನಾಯಕನನ್ನು ಕೊಲೆಗಾರ ಎಂದು ಕರೆಯುವುದು ಸರಿಯಲ್ಲ ಎಂದು ಮಿಶ್ರಾ ನ್ಯಾಯಾಲಯಕ್ಕೆ ಹೇಳಿದ್ದಾರೆ.