ತುಮಕೂರು: ಸಿದ್ದಗಂಗಾ ಮಠದಿಂದ ಬಿಸಿಎಂ ಹಾಸ್ಟೆಲ್ಗಳಿಗೆ ಅಕ್ಕಿ ಸಾಲ ಪಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಗೀತಮ್ಮ ಅವರನ್ನು ಸಸ್ಪೆಂಡ್ ಮಾಡಲಾಗಿದೆ.
ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತ ಕೆ.ಎ ದಯಾನಂದರಿಂದ ಅಮಾನತು ಮಾಡಿ ಆದೇಶ ಹೊಡಿಸಿದ್ದಾರೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಸರಿಯಾದ ಸಮಯಕ್ಕೆ ಅಕ್ಕಿ ವಿತರಣೆ ಆದರೂ, ಕಲ್ಯಾಣಾಧಿಕಾರಿ ಗೀತಮ್ಮ ಹಾಸ್ಟೆಲ್ಗಳಿಗೆ ಅಕ್ಕಿಯನ್ನು ಎತ್ತುವಳಿ ಮಾಡಲು ಹಿಂದೇಟು ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.
2-3 ತಿಂಗಳಿನಿಂದ ಸಾಲ ನೀಡುತ್ತಿರುವ ಮಠ
ಬಿಸಿಎಂ ಹಾಸ್ಟೆಲ್ಗಳಿಗೆ ಕರ್ನಾಟಕ ಸರ್ಕಾರದಿಂದ ಅಕ್ಕಿ ಪೂರೈಕೆಯಾಗಿಲ್ಲ. ಹೀಗಾಗಿ ಸಿದ್ದಗಂಗಾ ಮಠದಿಂದ ಅಕ್ಕಿಯನ್ನು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಾಲವಾಗಿ ಪಡೆದಿದೆ ಎಂದು ಪವರ್ ಟಿವಿ ವರದಿ ಮಾಡಿತ್ತು.ಬಗ್ಗೆ ಮಠದ ಆಡಳಿತಾಧಿಕಾರಿ ವಿಶ್ವನಾಥ್ ಸ್ಪಷ್ಟನೆ ನೀಡಿದ್ದು, ಮಠದಿಂದ ಅಕ್ಕಿಯನ್ನು ಸಾಲವಾಗಿ ನೀಡಿದ್ದು ನಿಜ ಎಂದಿದ್ದರು.
80 ಚೀಲ ಅಕ್ಕಿಯನ್ನು ಶ್ರೀಮಠ ಸಾಲವಾಗಿ ನೀಡಿದೆ
ಸುಮಾರು 80 ಚೀಲ ಅಕ್ಕಿಯನ್ನು ಶ್ರೀಮಠ ಸಾಲವಾಗಿ ನೀಡಿದೆ. ಬಿಸಿಎಂ ಹಾಸ್ಟೆಲ್ಗಳಿಗೆ ಮಠದಿಂದ ಅಕ್ಕಿ ಸಾಲವಾಗಿ ಕೊಟ್ಟಿರುವುದು ನಿಜ.ಕಳೆದ ಎರಡು ಮೂರು ತಿಂಗಳ ಹಿಂದೆ ಅಕ್ಕಿ ಕೊಟ್ಟಿದ್ದೇವೆ. ಬಿಸಿಎಂ ಹಾಸ್ಟೆಲ್, ಶಾಲೆಗಳಿಗೆ ಅಕ್ಕಿ ಪೂರೈಕೆ ವಿಳಂಬವಾಗಿ ಮಠದಿಂದ ಪಡೆದುಕೊಂಡಿದ್ದಾರೆ. ಹಲವು ಬಾರಿ ಸಾಲ ತೆಗೆದುಕೊಂಡು ಹೋಗಿದ್ದಾರೆ. ನಮಗೆ ಅದರ ಲೆಕ್ಕ ಇಲ್ಲ. ಅಕ್ಕಿ ತೆಗೆದುಕೊಂಡು ಹೋಗಿರುವುದು ಮಾತ್ರ ಗ್ಯಾರಂಟಿ ಎಂದು ಹೇಳಿದ್ದರು.