ಬೆಂಗಳೂರು: ಖಾಸಗಿ ಶಾಲೆಗಳಲ್ಲಿ ಇನ್ನು ಮುಂದೆ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂದು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಖಾಸಗಿ ಶಾಲೆಗಳಿಗೆ ನಾಡಗೀತೆ ಹಾಡುವುದಕ್ಕೆ ವಿನಾಯಿತಿ ನೀಡಿದ ಸರ್ಕಾರಿ ಶಾಲೆಗಳು ಮತ್ತು ಅನುದಾನಿತ ಶಾಲೆಗಳಲ್ಲಿ ಮಾತ್ರ ನಾಡಗೀತೆ ಹಾಡಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿವಾದಿತ ಆದೇಶವನ್ನು ಹೊರಡಿಸಿದೆ.
ಇದನ್ನೂ ಓದಿ: ಪ್ರಧಾನಿ ಮೋದಿ ಒಕ್ಕೂಟ ವ್ಯವಸ್ಥೆಗೆ ಅಪಾಯ: ಸಿ.ಎಂ
ಹಿಂದಿನ ಆದೇಶವನ್ನು ಬದಲಾವಣೆ ಮಾಡಿದ ರಾಜ್ಯ ಸರ್ಕಾರ ಈಗ ಎಲ್ಲಾ ಶಾಲೆಗಳು ಎಂಬುದರ ಬದಲಾಗಿ ಸರ್ಕಾರಿ ಶಾಲೆಗಳು ಎಂದು ಬದಲಾವಣೆ ಮಾಡಿ ಆದೇಶ ಹೊರಡಿಸಿದೆ.
ಈ ಕುರಿತು ಸಚಿವರ ಸ್ಪಷ್ಟನೆ!:
ಈ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತವಾಗಿದ್ದು, ಇದಕ್ಕೆ ಇಂದು ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ, ಒಂದು ಸಣ್ಣ ಪ್ರಿಂಟ್ ಸಮಸ್ಯೆ ಆಗಿದೆ. ನಮಗೆ ಎಲ್ಲಾ ಶಾಲೆಗಳೂ ಒಂದೇ. ಆದೇಶ ಮಾಡಬೇಕಾದರೆ ಸರ್ಕಾರಿ ಶಾಲೆ ಅನುದಾನಿತ ಶಾಲೆ ಅಂತ ಪ್ರಿಂಟ್ ಮಿಸ್ಟೇಕ್ ಆಗಿದೆ. ಅದು ಎಲ್ಲ ಶಾಲೆಗಳು ಅಂತ ತಿದ್ದುಪಡಿ ಮಾಡಿಸುತ್ತೇವೆ. ನಮ್ಮ ಸರ್ಕಾರಕ್ಕೆ ಕನ್ನಡ ಬಗ್ಗೆ ಕಾಳಜಿ ಇದೆ. ನಾವು ಬಹಳ ಸ್ಪಷ್ಟವಾಗಿ ಇದ್ದೇವೆ. ಆದೇಶ ಪ್ರತಿಯ ಸಾಧಕ-ಭಾದಕ ಹೇಳಬೇಕು. ಸಹಜವಾಗಿ ನೋಟ್ ಶೀಟ್ ಒಳಗಡೆ ಸಣ್ಣಪುಟ್ಟ ಸಮಸ್ಯೆ ಆಗಿದೆ ಎಂದು ಹೇಳಿದರು.