Saturday, July 27, 2024

ತಪ್ಪಿನ ಅರಿವಾಗಿ ಕಾಂಗ್ರೆಸ್​ಗೆ ಮರಳಿ ಸೇರ್ಪಡೆಯಾಗಿದ್ದಾರೆ : ಸಿದ್ದರಾಮಯ್ಯ

ಬೆಂಗಳೂರು : ಮುದ್ದಹನುಮೇಗೌಡ ಅವರಿಗೆ ತಪ್ಪಿನ ಅರಿವಾಗಿ ಕಾಂಗ್ರೆಸ್ ಪಕ್ಷಕ್ಕೆ ಮರಳಿ ಸೇರ್ಪಡೆಯಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಸ್.ಪಿ. ಮುದ್ದಹನುಮೇಗೌಡ ಅವರನ್ನು ಕಾಂಗ್ರೆಸ್​ ಪಕ್ಷಕ್ಕೆ ಬರಮಾಡಿಕೊಂಡು ಅವರು ಮಾತನಾಡಿದರು.

ಮುದ್ದಹನುಮೇಗೌಡರನ್ನು ಪಕ್ಷಕ್ಕೆ ಹಾರ್ದಿಕವಾಗಿ ಸ್ವಾಗತಿಸುತ್ತೇನೆ. ಮುದ್ದಹನುಮೇಗೌಡ ಮೂಲತಃ ಕಾಂಗ್ರೆಸ್‌ನವರು. ಕಳೆದ ವಿಧಾನಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಅವರ ತಪ್ಪಿನ ಅರಿವಾಗಿ ಕಾಂಗ್ರೆಸ್ ಪಕ್ಷಕ್ಕೆ ಮರಳಿ ಸೇರ್ಪಡೆಯಾಗಿದ್ದಾರೆ ಎಂದು ತಿಳಿಸಿದರು.

ಪಶ್ಚಾತ್ತಾಪಕ್ಕಿಂತ ದೊಡ್ಡ ಶಿಕ್ಷೆ ಮತ್ತೊಂದಿಲ್ಲ

ತಪ್ಪು ಮಾಡಿದ್ದೇನೆ, ಕ್ಷಮೆ ಇರಲಿ ಎಂದು ಮುದ್ದಹನುಮೇಗೌಡರು ಹೇಳಿದ್ದಾರೆ. ತಪ್ಪು ಮಾಡಿದ ಮೇಲೆ ಪಶ್ಚಾತ್ತಾಪ ಮುಖ್ಯ. ಪಶ್ಚಾತ್ತಾಪಕ್ಕಿಂತ ದೊಡ್ಡ ಶಿಕ್ಷೆ ಮತ್ತೊಂದಿಲ್ಲ. ಪಕ್ಷಕ್ಕೆ ಯಾರೇ ಬಂದರೂ ಸೇರಿಸಿಕೊಳ್ಳುತ್ತೇವೆ ಎಂದು ಪಕ್ಷದ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ತುಮಕೂರು ಜಿಲ್ಲೆಯ ಮುಖಂಡರೆಲ್ಲರೂ ಸೇರಿ ಮುದ್ದಹನುಮೇಗೌಡರನ್ನು ಸೇರಿಸಿಕೊಳ್ಳಲು ಒಪ್ಪಿದ್ದಾರೆ ಎಂದು ಹೇಳಿದರು.

ತುಮಕೂರು ಜಿಲ್ಲೆಯಲ್ಲಿ ಗೆಲ್ಲಲು ಅವಕಾಶವಿದೆ

ಮುಂದಿನ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಜಿಲ್ಲೆಯವರು ಯಾರನ್ನು ಸೂಚಿಸುತ್ತಾರೋ ಅವರನ್ನೇ ಅಭ್ಯರ್ಥಿ ಮಾಡುತ್ತೇವೆ. ತುಮಕೂರು ಜಿಲ್ಲೆಯಲ್ಲಿ ಗೆಲ್ಲಲು ಅವಕಾಶವಿದೆ. ಒಳ್ಳೆಯ ವಾತಾವರಣವಿದೆ. ಸರ್ಕಾರ ಕೂಡ ಜನಪರವಾದ ಕೆಲಸಗಳನ್ನು ಮಾಡಿದೆ. ಐದು ಗ್ಯಾರಂಟಿಗಳನ್ನು ಜಾರಿ ಮಾಡಿ, ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ. ಆದ್ದರಿಂದ ಇಡೀ ರಾಜ್ಯದಲ್ಲಿ ಒಳ್ಳೆಯ ವಾತಾವರಣವಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

RELATED ARTICLES

Related Articles

TRENDING ARTICLES