Sunday, January 26, 2025

ಇಸ್ರೊ ಅಧ್ಯಕ್ಷ ಸೋಮನಾಥ್​ಗೆ ಗೌರವ ಡಾಕ್ಟರೇಟ್​ ಪ್ರದಾನ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯ ವತಿಯಿಂದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಅಧ್ಯಕ್ಷ ಎಸ್. ಸೋಮನಾಥ್ ಅವರಿಗೆ  ಗೌರವ ಡಾಕ್ಟರೇಟ್ ಪದವಿಯನ್ನು ನೀಡಿ  ಗೌರವ ಸಲ್ಲಿಸಲಾಗಿದೆ.

ವಿ.ವಿ ಬುಧವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್​ ಚಂದ್ ಅವರು ಎಸ್. ಸೋಮನಾಥ್ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿ ಮಾತನಾಡಿ ‘ಸೋಮನಾಥ್ ಅವರ ನಾಯಕತ್ವದಲ್ಲಿ ಇಸ್ರೋ ಗಮನಾರ್ಹ ಸಾಧನೆಗಳನ್ನು ಮಾಡಿದೆ. ಚಂದ್ರಯಾನ-3 ಯೋಜನೆಯ ಹಿಂದಿನ ಪ್ರೇರಕ ಶಕ್ತಿಯಾಗಿ ಅವರು ನಿರ್ಣಾಯಕ ಪಾತ್ರ ವಹಿಸಿದ್ದಾರೆ. ಅವರ ನಾಯಕತ್ವ ಮತ್ತು ದೂರದೃಷ್ಟಿಯಿಂದ ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಅತ್ಯುನ್ನತ ಸಾಧನೆಗಳನ್ನು ಮಾಡುತ್ತಿದೆ’ ಎಂದು ಹೇಳಿದರು.

‘ಕರ್ನಾಟಕವು ಶಿಕ್ಷಣ, ಮಾಹಿತಿ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದೆ. ಇಲ್ಲಿ ಅನೇಕ ವಿಶ್ವ ದರ್ಜೆಯ ಸಂಶೋಧನಾ ಕೇಂದ್ರಗಳು ಮತ್ತು ಶಿಕ್ಷಣ ಸಂಸ್ಥೆಗಳಿವೆ. ಅದರಲ್ಲಿ ಬೆಂಗಳೂರು ವಿಶ್ವವಿದ್ಯಾಲಯವೂ ಒಂದಾಗಿದೆ’ ಎಂದರು.

RELATED ARTICLES

Related Articles

TRENDING ARTICLES