Thursday, April 25, 2024

MP Election 2024 : ಡಾ.ಮಂಜುನಾಥ್​ ಸ್ಪರ್ಧೆ ಬಗ್ಗೆ ಮಾಜಿ ಸಿಎಂ ಹೆಚ್ಡಿಕೆ ಸ್ಪಷ್ಟನೆ

ಬೆಂಗಳೂರು : ಮೈತ್ರಿ ಸೀಟು ಹಂಚಿಕೆ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಅವರು ಸ್ಪಷ್ಟನೆ ನೀಡಿದ್ದಾರೆ.

ವಿಧಾನಸೌಧದಲ್ಲಿಂದು ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, ಲೋಕಸಭಾ ಸೀಟು ವಿಚಾರದಲ್ಲಿ ಯಾವುದೇ ಸಮಸ್ಯೆ ಇಲ್ಲ. ರಾಜ್ಯದಲ್ಲಿರುವ 28ಕ್ಕೆ 28 ಲೋಕಸಭಾ ಕ್ಷೇತ್ರಗಳನ್ನ ಗೆಲ್ಲಬೇಕು. ಇಂತಹ ಕೆಟ್ಟ ಸರ್ಕಾರ ಕಿತ್ತು ಹಾಕಬೇಕು ಎಂದು ಕಾಂಗ್ರೆಸ್​​ ಸರ್ಕಾರದ ವಿರುದ್ಧ ಗುಡುಗಿದರು.

ಇದೇ ವೇಳೆ ಜಯದೇವ ಆಸ್ಪತ್ರೆ ನಿವೃತ್ತ ನಿರ್ದೇಶಕ ಡಾ.ಮಂಜುನಾಥ್​ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಮಾತನಾಡಿದ ಅವರು, ಡಾ.ಮಂಜುನಾಥ್​ ಅವರು ರಾಜ್ಯದಲ್ಲಿ ಸೇವೆ ಸಲ್ಲಿಸಿದ್ದಾರೆ. ಅವರ ಬಗ್ಗೆ ಅಪಾರ ಗೌರವವಿದೆ. ಎಲ್ಲ ಕಡೆಗಳಲ್ಲೂ ರಾಜಕೀಯ ಬರಬೇಕು ಅಂತಾ ಹೇಳ್ತಿದ್ದಾರೆ. ಅವರು ಹೇಳಿದ್ದಾರೆ. ಇನ್ನೂ ತೀರ್ಮಾನ ಮಾಡಿಲ್ಲ ಅಂದಿದ್ದಾರೆ. ಏನಾಗುತ್ತೋ..! ಮುಂದೆ ನೋಡೋಣ ಎಂದು ಹೆಚ್.ಡಿ ಕುಮಾರಸ್ವಾಮಿ ಅವರು ನುಡಿದರು.

RELATED ARTICLES

Related Articles

TRENDING ARTICLES