Thursday, April 25, 2024

ಕಳಚಿದ ಕೊಂಡಿ : ಮಹಾರಾಷ್ಟ್ರ ಮಾಜಿ ಸಿಎಂ ಮನೋಹರ್ ಜೋಶಿ ಇನ್ನಿಲ್ಲ

ಬೆಂಗಳೂರು : ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಹಾಗೂ ಶಿವಸೇನೆ ಹಿರಿಯ ನಾಯಕ ಮನೋಹರ್ ಜೋಶಿ (86) ನಿಧನರಾಗಿದ್ದಾರೆ.

ಮನೋಹರ್ ಜೋಶಿ ಅವರು ಹೃದಯಾಘಾತದಿಂದ ಮುಂಬೈನ ಹಿಂದೂಜಾ ಆಸ್ಪತ್ರೆಗೆ ದಾಖಲಾಗಿದ್ದರು. ಐಸಿಯುನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಬೆಳಗ್ಗೆ 3 ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ.

ಕೆಲವು ತಿಂಗಳ ಹಿಂದೆ ಮನೋಹರ್ ಜೋಶಿ ಮೆದುಳಿನ ರಕ್ತಸ್ರಾವದಿಂದ ಹಿಂದೂಜಾ ಆಸ್ಪತ್ರೆಗೆ ದಾಖಲಾಗಿದ್ದರು. ಚೇತರಿಸಿಕೊಂಡ ಬಳಿಕ ಅವರನ್ನು ಡಿಸ್ಚಾರ್ಜ್ ಮಾಡಲಾಗಿತ್ತು. ಅನಾರೋಗ್ಯದ ಹಿನ್ನೆಲೆಯಲ್ಲಿ ಕಳೆದ ಹಲವು ದಿನಗಳಿಂದ ಮನೋಹರ್ ಜೋಶಿ ಸಕ್ರಿಯ ರಾಜಕಾರಣದಿಂದ ದೂರ ಉಳಿದಿದ್ದರು.

1995ರಿಂದ 1999ರವರೆಗೆ ಸಿಎಂ ಆಗಿ ಸೇವೆ

ರಾಯಗಡ ಜಿಲ್ಲೆಯ ನಂಡ್ವಿ ಗ್ರಾಮದಲ್ಲಿ 1937ರ ಡಿಸೆಂಬರ್​​ 2 ರಂದು ಮನೋಹರ್ ಜೋಶಿ ಜನಿಸಿದರು. ಮುಂಬೈ ವಿಶ್ವವಿದ್ಯಾಲಯದಿಂದ ಎಂಎ ಮತ್ತು ಎಲ್​ಎಲ್​ಬಿ ಪದವಿಗಳನ್ನು ಪಡೆದರು. 1995ರಿಂದ 1999ರವರೆಗೆ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು.

ಲೋಕಸಭಾ ಸ್ಪೀಕರ್ ಆಗಿಯೂ ಸೇವೆ

ಮನೋಹರ್ ಜೋಶಿ ಅವಿಭಜಿತ ಶಿವಸೇನಾದಿಂದ ರಾಜ್ಯದಲ್ಲಿ ಉನ್ನತ ಹುದ್ದೆಯನ್ನು ಅಲಂಕರಿಸಿದ ಮೊದಲ ನಾಯಕರಾಗಿದ್ದರು. ಸಂಸತ್ ಸದಸ್ಯರಾಗಿಯೂ ಸೇವೆ ಇವರು ಸಲ್ಲಿದ್ದರು. ವಾಜಪೇಯಿ ಸರ್ಕಾರ ಅಧಿಕಾರದಲ್ಲಿದ್ದಾಗ 2002ರಿಂದ 2004ರವರೆಗೆ ಲೋಕಸಭಾ ಸ್ಪೀಕರ್ ಆಗಿಯೂ ಸೇವೆ ಸಲ್ಲಿದ್ದರು.

ಮನೋಹರ್ ಜೋಶಿ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

RELATED ARTICLES

Related Articles

TRENDING ARTICLES