Friday, September 20, 2024

ಸಂವಿಧಾನ ಅರಿಯದಿದ್ದರೆ ಭಾರತವು ಸಮೃದ್ಧವಾಗಲು ಸಾಧ್ಯವಿಲ್ಲ: ಸಚಿವ ಹೆಚ್​.ಸಿ ಮಹದೇವಪ್ಪ

ಬೆಂಗಳೂರು: ಸಂವಿಧಾನವನ್ನು ಜನರು ಸರಿಯಾಗಿ ಅರ್ಥಮಾಡಿಕೊಳ್ಳದಿದ್ದರೆ ಸಮೃದ್ಧ ಭಾರತವನ್ನು ನಿರ್ಮಿಸಲು ಸಾಧ್ಯವಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಹೆಚ್.ಸಿ. ಮಹದೇವಪ್ಪ ಹೇಳಿದ್ದಾರೆ.

ಬೃಹತ್ ಸಂವಿಧಾನ ಮತ್ತು ರಾಷ್ಟ್ರೀಯ ಏಕತಾ ಸಮಾವೇಶದ ಕುರಿತು ಮಾತನಾಡಿದ ಅವರು, ಕರ್ನಾಟಕ ಸರ್ಕಾರವು ಒಂದು ತಿಂಗಳ ಕಾಲ ರಾಜ್ಯವ್ಯಾಪಿ ನಡೆದ ಸಂವಿಧಾನ ಜಾಗೃತಿ ಅಭಿಯಾನವು ಬಹುತೇಕ ಎಲ್ಲಾ ಗ್ರಾಮಗಳನ್ನು ಒಳಗೊಂಡಿದ್ದು, ಇದೀಗ ಅಂತಿಮ ಹಂತ ತಲುಪಿದೆ ಎಂದರು.

ಭಾರತೀಯ ಸಂವಿಧಾನವನ್ನು ಅಂಗೀಕರಿಸಿದ 75 ವರ್ಷಗಳ ಸ್ಮರಣಾರ್ಥವಾಗಿ ನಾಗರಿಕರಿಗೆ ಅವರ ಹಕ್ಕುಗಳು, ಜವಾಬ್ದಾರಿಗಳು ಮತ್ತು ಕರ್ತವ್ಯಗಳ ಬಗ್ಗೆ ಅರಿವು ಮೂಡಿಸಲು ಕರ್ನಾಟಕ ಸರ್ಕಾರ ಜನವರಿ 26 ರಂದು ಸಂವಿಧಾನ ಜಾಗೃತಿ ಅಭಿಯಾನವನ್ನು ಪ್ರಾರಂಭಿಸಿತು.

‘ಜನರಿಗೆ ಆರ್ಥಿಕ ಮತ್ತು ಸಾಮಾಜಿಕ ಸ್ವಾತಂತ್ರ್ಯ ನೀಡದಿದ್ದರೆ ಸ್ವಾತಂತ್ರ್ಯಕ್ಕೆ ಅರ್ಥವಿರುವುದಿಲ್ಲ. ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ಸಂವಿಧಾನದ ಉದ್ದೇಶಗಳು ಈಡೇರದ ಕಾರಣ ಎಲ್ಲೆಡೆ ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆ ಎದ್ದು ಕಾಣುತ್ತಿದೆ’ ಎಂದು ಸಚಿವರು ತಿಳಿಸಿದರು.

‘ನಾವು ಸಂವಿಧಾನವನ್ನು ಅರ್ಥಮಾಡಿಕೊಳ್ಳದಿದ್ದರೆ, ನಾವು ಸಮೃದ್ಧ ಭಾರತವನ್ನು ಹೇಗೆ ನಿರ್ಮಿಸಲು ಸಾಧ್ಯವಾಗುತ್ತದೆ? ಸಂವಿಧಾನವು ಕೇವಲ SC/ST ಮೀಸಲಾತಿಗೆ ಸೀಮಿತವಾಗಿಲ್ಲ. ದೀನದಲಿತ ಸದಾಯಗಳಿಗೆ ತಮ್ಮನ್ನು ತಾವು ಮೇಲ್ದರ್ಜೆಗೆ ಏರಿಸಿಕೊಳ್ಳಲು ನೀಡಿದ ಅವಕಾಶವೂ ಆಗಿದೆ. ಪ್ರಜಾಪ್ರಭುತ್ವವನ್ನು ಬಲಪಡಿಸಲು ದೇಶದಲ್ಲಿ ಕೈಗೊಂಡ ಉಪಕ್ರಮಗಳ ಬಗ್ಗೆ ಜನರಿಗೆ ತಿಳಿಸುವುದು ತಿಂಗಳ ಕಾರ್ಯಕ್ರಮವನ್ನು ಆಯೋಜಿಸಿದ್ದರ ಹಿಂದಿನ ಉದ್ದೇಶವಾಗಿದೆ’ ಎಂದರು.

ರಾಜಕೀಯವಲ್ಲದ, ಜಾತ್ಯತೀತ ಮತ್ತು ಜಾತಿರಹಿತವಾಗಿದೆ ಎಂದು ಒತ್ತಿ ಹೇಳಿದ ಮಹದೇವಪ್ಪ, ಜನರಲ್ಲಿ ಜಾಗೃತಿ ಮೂಡಿಸುವ ಮೂಲಕ ಸಂವಿಧಾನವನ್ನು ಉಳಿಸಲು ಇದನ್ನು ಆಯೋಜಿಸಲಾಗುತ್ತಿದೆ. ನಾವು ನಮ್ಮ ಸಂವಿಧಾನವನ್ನು ಉಳಿಸಿದರೆ, ಅದು ನಮ್ಮನ್ನು ಉಳಿಸುತ್ತದೆ ಎಂದು ಅವರು ಹೇಳಿದರು.

ಈ ಅಭಿಯಾನವು ಸುಮಾರು 5,400 ಗ್ರಾಮ ಪಂಚಾಯಿತಿಗಳನ್ನು ಒಳಗೊಂಡಿದೆ ಮತ್ತು ಸಮಾಜದ ಎಲ್ಲಾ ವರ್ಗದ ಜನರು ಇದರಲ್ಲಿ ಭಾಗವಹಿಸಿದ್ದಾರೆ.

RELATED ARTICLES

Related Articles

TRENDING ARTICLES