Thursday, April 25, 2024

40% ಕಮಿಷನ್ ಆರೋಪ : ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿಕೆಶಿಗೆ ಸಮನ್ಸ್

ಬೆಂಗಳೂರು : ಬಿಜೆಪಿ ವಿರುದ್ಧ 40% ಕಮಿಷನ್ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. 

ಕಳೆದ ವರ್ಷ ಕರ್ನಾಟಕ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಲು ಕಾಂಗ್ರೆಸ್ ಕಮಿಷನ್ ಆರೋಪಗಳನ್ನು ಬಳಸಿಕೊಂಡಿತ್ತು. ಈ ಸಂಬಂಧ ಸಮನ್ಸ್​ ನೀಡಲಾಗಿದೆ.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮುಖಾಮುಖಿಯೊಂದಿಗೆ ಪೇಸಿಎಂ ಪೋಸ್ಟರ್‌ಗಳನ್ನು ಸಹ ವೈರಲ್ ಆಗಿತ್ತು. ಹೀಗಾಗಿ, ಬಿಜೆಪಿಯ ಕಾನೂನು ಘಟಕದ ವಕೀಲ ವಿನೋದ್ ಕುಮಾರ್ ಅವರು ಜಾಹೀರಾತುಗಳ ಬಗ್ಗೆ ಕಾಂಗ್ರೆಸ್ ನಾಯಕರ ವಿರುದ್ಧ ದೂರು ದಾಖಲಿಸಿದ್ದರು.

ಮಾ.28ಕ್ಕೆ ಹಾಜರಾಗುವಂತೆ ಸಮನ್ಸ್​

ದೂರಿನ ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಮಾರ್ಚ್ 28ಕ್ಕೆ ಖುದ್ದು ಹಾಜರಾಗುವಂತೆ ಸಮನ್ಸ್ ಜಾರಿಗೊಳಿಸಿದೆ. ವಾದ ಆಲಿಸಿದ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶ ಜೆ. ಪ್ರೀತ್ ಅವರು, ಮಾರ್ಚ್ 28ಕ್ಕೆ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಖುದ್ದು ಹಾಜರಾಗುವಂತೆ ಸಮನ್ಸ್​ ನೀಡಿ ಆದೇಶಿಸಿದ್ದಾರೆ.

RELATED ARTICLES

Related Articles

TRENDING ARTICLES