Tuesday, December 3, 2024

WPL 2024: ಮಹಿಳಾ ಪ್ರೀಮಿಯರ್ ಲೀಗ್​ಗೆ ಇಂದು ಚಾಲನೆ: ಮುಂಬೈ-ಡೆಲ್ಲಿ ತಂಡಗಳ ಹೈವೋಲ್ಟೇಜ್ ಪಂದ್ಯ

ಬೆಂಗಳೂರು: ಮಹಿಳಾ ಕ್ರಿಕೆಟಿಗರ ವರ್ಣರಂಜಿತ ಟಿ20 ಕ್ರಿಕೆಟ್​ ಲೀಗ್ WPL 2024 2ನೇ ಆವೃತ್ತಿಗೆ ಇಂದು ಚಾಲನೆ ಸಿಗಲಿದೆ.ಬೆಂಗಳೂರಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂ ಈ ಹೈವೋಲ್ಟೇಜ್ ಪಂದ್ಯಕ್ಕೆ ಇಂದು ಸಾಕ್ಷಿಯಾಗಲಿದೆ.

ಈ ಟೂರ್ನಿಯು ಒಟ್ಟು 24 ದಿನಗಳ ಕಾಲ ನಡೆಯಲಿದೆ. ಮೊದಲ ಪಂದ್ಯದಲ್ಲಿ ಇಂದು ಹರ್ಮನ್​ಪ್ರಿತ್ ಕೌರ್ ನಾಯಕತ್ವದ ಮುಂಬೈ ಇಂಡಿಯನ್ಸ್ ಮತ್ತು ಮೆಗ್ ಲ್ಯಾನಿಂಗ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ಮಹಿಳಾ ತಂಡ  ಮುಖಾಮುಖಿ ಆಗಲಿದೆ.

ಈ ಪಂದ್ಯ ಆರಂಭಕ್ಕೂ ಮುನ್ನ ಉದ್ಘಾಟನಾ ಸಮಾರಂಭ ಏರ್ಪಡಿಸಲಾಗಿದೆ. ಇದರಲ್ಲಿ ಶಾಹಿದ್ ಕಪೂರ್, ಶಾರುಖ್ ಖಾನ್ ಸೇರಿದಂತೆ ಅನೇಕ ಬಾಲಿವುಡ್ ತಾರೆಯರು ಅಭಿಮಾನಿಗಳನ್ನು ರಂಚಿಸಲಿದ್ದಾರೆ.

ಮುಂಬೈ ಇಂಡಿಯನ್ಸ್ ತಂಡ

ಮುಂಬೈ ಇಂಡಿಯನ್ಸ್ ಮಹಿಳಾ ತಂಡದಲ್ಲಿ ಅಮನ್‌ಜೋತ್ ಕೌರ್, ಅಮೆಲಿಯಾ ಕೆರ್, ಕ್ಲೋಯ್ ಟ್ರಯಾನ್, ಹರ್ಮನ್‌ಪ್ರೀತ್ ಕೌರ್, ಹೇಲಿ ಮ್ಯಾಥ್ಯೂಸ್, ಹುಮೈರಾ ಕಾಜಿ, ಇಸ್ಸಿ ವಾಂಗ್, ಜಿಂತಿಮಣಿ ಕಲಿತಾ, ನ್ಯಾಟ್ ಸ್ಕಿವರ್-ಬ್ರಂಟ್, ಪೂಜಾ ವಸ್ತ್ರಾಕರ್, ಪ್ರಿಯಾಂಕಾ ಬಾಲಾ, ಸೈಕಾ ಇಶಾಕ್, ಯಾಸ್ತಿಕಾ ಭಾಟಿಯಾ, ಶಬ್ನಿಮ್ ಇಸ್ಮಾಯಿಲ್, ಅಮನದೀಪ್ ಕೌರ್, ಫಾತಿಮಾ ಜಾಫರ್, ಕೀರ್ತನಾ ಬಾಲಕೃಷ್ಣನ್.

ಡೆಲ್ಲಿ ಕ್ಯಾಪಿಟಲ್ಸ್ ತಂಡ

ಡೆಲ್ಲಿ ಕ್ಯಾಪಿಟಲ್ಸ್ ಮಹಿಳಾ ತಂಡದಲ್ಲಿ ಆಲಿಸ್ ಕ್ಯಾಪ್ಸೆ, ಅರುಂಧತಿ ರೆಡ್ಡಿ, ಜೆಮಿಮಾ ರಾಡ್ರಿಗಸ್, ಜೆಸ್ ಜೊನಾಸೆನ್, ಲಾರಾ ಹ್ಯಾರಿಸ್, ಮರಿಜಾನ್ನೆ ಕಪ್, ಮೆಗ್ ಲ್ಯಾನಿಂಗ್, ಮಿನ್ನು ಮಣಿ, ಪೂನಮ್ ಯಾದವ್, ರಾಧಾ ಯಾದವ್, ಶೆಫಾಲಿ ವರ್ಮಾ, ಶಿಖಾ ಪಾಂಡೆ, ಸ್ನೇಹಾ ದೀಪ್ತಿ, ತನಿಯಾಸ್ ಭಾಟಿಯಾ, ಅನ್ನಾಸ್ ಭಾಟಿಯಾ, ಅನ್ನಾಸ್ ಭಾಟಿಯಾ, ಅಪರ್ಣಾ ಮೊಂಡಲ್, ಅಶ್ವನಿ ಕುಮಾರಿ.

ಮಹಿಳಾ ಪ್ರೀಮಿಯರ್ ಲೀಗ್​ನ ಮುಂಬೈ-ಡೆಲ್ಲಿ ನಡುವಣ ಮೊದಲ ಪಂದ್ಯ ಸಂಜೆ 7:30 ಕ್ಕೆ ಆರಂಭವಾಗಲಿದೆ. ಸಂಜೆ ಸುಮಾರು 6.30ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದೆ.

RELATED ARTICLES

Related Articles

TRENDING ARTICLES