Thursday, April 25, 2024

ಬಾಲಕನ ಪ್ರಾಣ ಕಸಿದ ಜೋಕಾಲಿ!

ದಾವಣಗೆರೆ: ಜೋಕಾಲಿ ಆಡುತ್ತಿದ್ದ ಬಾಲಕನೊಬ್ಬ ದುರ್ಮರಣಕ್ಕೀಡಾದ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸವಳಂಗ ಗ್ರಾಮದಲ್ಲಿ ನಡೆದಿದೆ.

ಇದನ್ನೂ ಓದಿ: ಬಿಜೆಪಿಯವರು ಜನರ ಭಾವನೆಗಳು, ಧರ್ಮ, ದೇವರ ಹೆಸರಿನಲ್ಲಿ ರಾಜಕಾರಣ ಮಾಡುತ್ತಾರೆ:ಡಿಕೆಶಿ

ಪಿ.ಜೆ ಕೊಟ್ರೇಶ್ ಮೃತ ಬಾಲಕ. ಖಾಸಗಿ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ. ಈತ ಶಾಲೆ ಮುಗಿಸಿ ಸಂಜೆ ಮನೆಗೆ ಬಂದ ಈತ ಮನೆಯಲ್ಲಿದ್ದ ಜೋಕಾಲಿಯಲ್ಲಿ ಕುಳಿತು ಆಟವಾಡುತ್ತಿದ್ದನು. ಹೀಗೆ ಆಟವಾಡುತ್ತಿದ್ದ ಸಂದರ್ಭದಲ್ಲಿ ಜೋಕಾಲಿ ಹಗ್ಗವು ಆಕಸ್ಮಿಕವಾಗಿ ಕೊರಳಿಗೆ ಸುತ್ತಿಕೊಂಡಿದೆ. ಪರಿಣಾಮ ಹಗ್ಗ ಬಿಗಿಯಾಗಿ ಬಾಲಕನಿಗೆ ಉಸಿರಾಡಲು ಸಾಧ್ಯವಾಗದೇ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ಈ ಘಟನೆ ಸಂಬಂಧ ಜಿಲ್ಲೆಯ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

Related Articles

TRENDING ARTICLES