Thursday, April 25, 2024

ಮುಖ್ಯಮಂತ್ರಿಗಳಿಗೆ ಶೃಂಗಾರ ಸಿರಿ ಬರಗಾಲದ ಜನರಿಗೆ ಸಂಕಟದ ಕಹಿ: ಬಿ.ವೈ ವಿಜಯೇಂದ್ರ ಲೇವಡಿ 

ಬೆಂಗಳೂರು: ಮುಖ್ಯಮಂತ್ರಿಗಳಿಗೆ ಶೃಂಗಾರ ಸಿರಿ ಬರಗಾಲದ ಜನರಿಗೆ ಸಂಕಟದ ಕಹಿ ಎಂದು ಬಿಜೆಪಿಯ ರಾಜ್ಯಾಧ್ಯಕ್ಷ  ಬಿ.ವೈ ವಿಜಯೇಂದ್ರ ಲೇವಡಿ ಮಾಡಿದ್ದಾರೆ. 

ಈ ಕುರಿತು ಎಕ್ಸ್​ನಲ್ಲಿ ಪೋಸ್ಟ್ ​ಮಾಡಿರುವ ಅವರು, ಜನ ಜಾನುವಾರುಗಳಿಗೆ ನೀರು, ಮೇವಿಗೆ ಆಹಾಕಾರ ಉಂಟಾಗಿ ನಾಡಿನೆಲ್ಲೆಡೆ ತೀವ್ರ ಬರ ಎದುರಿಸುತ್ತಿರುವ ಹೊತ್ತಲ್ಲಿ ತಮ್ಮ ಮನೆಯ ಶೃಂಗಾರಕ್ಕೆ ಬರೊಬ್ಬರಿ 9 ಕೋಟಿ ದುಂದು ವೆಚ್ಚ ಮಾಡುವ ಜರೂರು ಮುಖ್ಯಮಂತ್ರಿಗಳಿಗಿತ್ತೆ? ಎಂದು ಕಿಡಿಕಾರಿದ್ದಾರೆ.

ಹೊಟ್ಟೆಗೆ ಹಿಟ್ಟಿಲ್ಲ ಜುಟ್ಟಿಗೆ ಮಲ್ಲಿಗೆ ಹೂವು

ಹೀನಾಯ ಆರ್ಥಿಕ ಪರಿಸ್ಥಿತಿಯ ಕಾರಣಕ್ಕೆ ಅಭಿವೃದ್ಧಿ ಕಾರ್ಯಗಳು ನಿಂತ ನೀರಾಗಿದೆ, ಸಂಕಷ್ಟದ ಕಾಲದ ಪರಿಹಾರ ಕಾರ್ಯವೂ ಸ್ಥಗಿತಗೊಂಡಿದೆ, ಇಂಥಾ ಪರಿಸ್ಥಿತಿಯಲ್ಲೂ ಮನೆ ಶೃಂಗಾರದ ಆದ್ಯತೆ ಪಡೆದು 9 ಕೋಟಿ ನುಂಗಿದರೆ “ಹೊಟ್ಟೆಗೆ ಹಿಟ್ಟಿಲ್ಲ ಜುಟ್ಟಿಗೆ ಮಲ್ಲಿಗೆ ಹೂವು”..ಎಂಬ ಗಾದೆ ಮಾತು ನೆನಪಿಗೆ ಬರುತ್ತದೆ  ಎಂದು ಲೇವಾಡಿ ಮಾಡಿದ್ದಾರೆ.

RELATED ARTICLES

Related Articles

TRENDING ARTICLES