Monday, May 20, 2024

ಸರ್ಕಾರಿ ನೌಕರರಿಗೆ ಸ್ಯಾಲರಿ ನೀಡಲು ಸಿದ್ದರಾಮುಲ್ಲಾ ಖಾನ್ ಬಳಿ ಹಣವಿಲ್ಲ: ಸಂಸದ ಅನಂತ ಕುಮಾರ್ ಹೆಗಡೆ

ಉತ್ತರ ಕನ್ನಡ: ಸರ್ಕಾರಿ ನೌಕರರಿಗೆ ಸಂಬಳ ನೀಡಲು ಸಿದ್ದರಾಮುಲ್ಲಾ ಖಾನ್ ಬಳಿ ಹಣವಿಲ್ಲ ಎಂದು ಸಂಸದ ಅನಂತ ಕುಮಾರ್ ಹೆಗಡೆ ಮತ್ತೆ ಕಿಡಿಕಾರಿದ್ದಾರೆ. 

ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ದಿಢೀರ್ ಪ್ರತ್ಯಕ್ಯವಾಗಿರುವ ಸಂಸದ ಅನಂತ ಕುಮಾರ್ ಹೆಗಡೆ, ಪದೇ-ಪದೇ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಇತ್ತೀಚೆಗೆ, ಸಿದ್ದರಾಮಯ್ಯ ಅವರನ್ನು ಏಕವಚನದಲ್ಲಿ ನಿಂದಿಸಿದ್ದ ಹಗಡೆ, ಇದೀಗ, ಸಿದ್ದರಾಮುಲ್ಲಾ ಖಾನ್‌ ಎಂದಿದ್ದಾರೆ.

ರಾಜ್ಯ ಸರ್ಕಾರ ದಿವಾಳಿಯಾಗಿದೆ

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ಅವರು ಮಾತನಾಡಿದ ಅವರು “ಕ್ಷೇತ್ರಗಳಲ್ಲಿ ಅಭಿವೃದ್ಧಿ ಯೋಜನೆಗಳಿಗಾಗಿ ಶಾಸಕರಿಗೆ ಕೊಡಲು ಸರ್ಕಾರದಲ್ಲಿ ಹಣ ಇಲ್ಲ ಅಂತಾರೆ. ರಾಜ್ಯ ಸರ್ಕಾರ ದಿವಾಳಿಯಾಗಿದೆ” ಎಂದಿದ್ದಾರೆ.

” ಹಿಂದುಳಿದವರು, ಎಸ್​ಸಿ, ಎಸ್​ಟಿ ವರ್ಗದವರಿಗೆ ನೀಡಿದ್ದ 11,000 ಕೋಟಿ ರೂ. ನಾಪತ್ತೆಯಾಗಿದೆ. ಕೇಂದ್ರ ಸರ್ಕಾರ ತೆರಿಗೆ ಹಣ ಕೊಟ್ಟಿಲ್ಲವೆಂದು ಹೇಳುತ್ತಾರೆ. ತಮಿಳುನಾಡು, ಆಂಧ್ರ ಪ್ರದೇಶ, ಕೇರಳಕ್ಕೆ ಇಲ್ಲದ ವೇದನೆ ಇವರಿಗೆ ಯಾಕೆ” ಎಂದು ಪ್ರಶ್ನಿಸಿದ್ದಾರೆ.

 ಸಿದ್ದರಾಮುಲ್ಲಾ ಖಾನ್‌ಗೆ ಯಾಕೆ ತೊಂದರೆ?

ಉಳಿದ ರಾಜ್ಯಗಳಿಗೆ ಎಲ್ಲ ಸರಿ ಇರುವಾಗ, ಸಿದ್ದರಾಮುಲ್ಲಾ ಖಾನ್‌ಗೆ ಯಾಕೆ ತೊಂದರೆ? ದೇಶದಲ್ಲಿ ಶೇ.99.‌9 ರಷ್ಟು ಹಿಂದುಗಳು ತೆರಿಗೆ ಕಟ್ಟುತ್ತಾರೆ. ನಮ್ಮ ಹಣ ತೆಗೆದುಕೊಂಡು ಹೋಗಿ ಮಸೀದಿ, ಚರ್ಚ್‌ಗೆ ಯಾಕೆ ಕೊಟ್ಟಿದ್ದೀರಿ? ನಮ್ಮ ತೆರಿಗೆ ಹಣ ನಮಗೆ ಕೊಡಿ” ಎಂದಿದ್ದಾರೆ.

RELATED ARTICLES

Related Articles

TRENDING ARTICLES