Sunday, December 15, 2024

WPL 2024: ಮಹಿಳಾ ಪ್ರೀಮಿಯರ್ ಲೀಗ್​ನಲ್ಲಿ ಡೆಲ್ಲಿ ವಿರುದ್ಧ ಮುಂಬೈ ಇಂಡಿಯನ್ಸ್​ಗೆ ರೋಚಕ ಜಯ

ಬೆಂಗಳೂರು: ಮಹಿಳಾ ಪ್ರೀಮಿಯರ್ ಲೀಗ್​ನ ಉದ್ಘಾಟನಾ ಪಂದ್ಯದಲ್ಲಿ ಡೆಲ್ಲಿ ವಿರುದ್ಧ ಮುಂಬೈ ಇಂಡಿಯನ್ಸ್​ ರೋಚಕ ಜಯ ಸಾಧಿಸಿದೆ.

 ಹೌದು, ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಮಹಿಳಾ ಪ್ರೀಮಿಯರ್ ಲೀಗ್​ನ ಉದ್ಘಾಟನಾ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕೊನೆಯ ಎಸೆತದಲ್ಲಿ ಸಿಕ್ಸರ್​ ಸಿಡಿಸಿದ ಎಸ್​ ಸಂಜನಾ ಮುಂಬೈ ಇಂಡಿಯನ್ಸ್​ಗೆ 4 ವಿಕೆಟ್​​ ರೋಚಕ ಜಯ ತಂದುಕೊಟ್ಟಿದ್ದಾರೆ.

ಕ್ಯಾಪಿಟಲ್ಸ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಜಯಿಸಿದ ಮುಂಬೈ ಇಂಡಿಯನ್ಸ್ ನಾಯಕಿ ಹರ್ಮನ್​ಪ್ರೀತ್ ಕೌರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ.

ಇನ್ನು ಅಂತಿಮ ಹಂತದಲ್ಲಿ ಸ್ಪೋಟಕ ಇನಿಂಗ್ಸ್ ಆಡಿದ ಜೆಮಿಮಾ ಕೇವಲ 24 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ 42 ರನ್​ಗಳ ಕೊಡುಗೆ ನೀಡಿದರು. ಈ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್​ಗಳಲ್ಲಿ 5 ವಿಕೆಟ್​ ನಷ್ಟಕ್ಕೆ 171 ರನ್ ಕಲೆಹಾಕಿತು.

ಇದರಿಂದ ಪಂದ್ಯವು ಮತ್ತಷ್ಟು ರೋಚಕ ಅಂತ್ಯಕ್ಕೆ ತಲುಪಿತು. ಕೊನೆಯ ಎಸೆತದಲ್ಲಿ 5 ರನ್​ ಅಗತ್ಯವಿದ್ದಾಗ ಕ್ರೀಸ್​ಗೆ ಬಂದ ಎಸ್​ ಸಂಜನಾ ಕ್ರೀಸ್​ನಿಂದ ಮುಂದೆ ಬಂದು ಲಾಂಗ್​​​ ಆನ್​​ನತ್ತ ಭರ್ಜರಿ ಸಿಕ್ಸರ್​ ಬಾರಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.

RELATED ARTICLES

Related Articles

TRENDING ARTICLES