Thursday, April 25, 2024

ಇನ್ನೂ 9 ವರ್ಷ ಕಾಂಗ್ರೆಸ್ ಅಧಿಕಾರದಲ್ಲಿ ಇರುತ್ತೆ : ಡಿ.ಕೆ. ಶಿವಕುಮಾರ್ ಭವಿಷ್ಯ

ರಾಮನಗರ : ಇನ್ನೂ 9 ವರ್ಷ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇರಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭವಿಷ್ಯ ನುಡಿದರು.

ರಾಮನಗರ ಜಿಲ್ಲೆಯ ಬಿಡದಿಯ ಅವರಗೆರೆಯಲ್ಲಿ ನಡೆದ ಗೃಹಲಕ್ಷ್ಮಿ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮುಂದಿನ 9 ವರ್ಷ ನಮ್ಮ ಸರ್ಕಾರ ಬಲಿಷ್ಠವಾಗಿ ಇರಲಿದೆ ಎಂದು ಹೇಳಿದರು.

ಬೆಂಗಳೂರು ಗ್ರಾಮಾಂತರದಲ್ಲಿ ನನ್ನ ಸಹೋದರ, ಸಂಸದ ಡಿ.ಕೆ. ಸುರೇಶ್ ಯಶಸ್ವಿಯಾಗಿ ಕೆಲಸ ಮಾಡಿದ್ದಾರೆ. ಈ ಸುರೇಶ್ ಅವರನ್ನ ಸೋಲಿಸಲು ಬಿಜೆಪಿ ಹಾಗೂ ಜೆಡಿಎಸ್ ತಬ್ಬಾಡ್ತಿದ್ದಾರೆ. ಹೆಚ್.ಡಿ. ಕುಮಾರಸ್ವಾಮಿ ಹಾಗೂ ಸಿ.ಪಿ. ಯೋಗೇಶ್ವರ್ ಹಿಂದೆ ಕುಸ್ತಿ ಆಡುತ್ತಿದ್ರು. ಈಗ ಸುರೇಶ್ ಸೋಲಿಸಲು ಒಂದಾಗ್ತಿದ್ದಾರೆ ಎಂದು ಕುಟುಕಿದರು.

ಉಸಿರು ಇರೋ ವರೆಗೂ ನಿಮ್ಮ ಸೇವೆ ಮಾಡುತ್ತೇವೆ

ರಾಮನಗರ ಜಿಲ್ಲೆ ಮಾಡ್ರನ್ ಜಿಲ್ಲೆಯಾಗಿ ಪರಿವರ್ತನೆ ಆಗುತ್ತದೆ. ಆದೃಷ್ಠಿಯಲ್ಲಿ ಕಾರ್ಯಕ್ರಮ ರೂಪಿಸುತ್ತಿದ್ದೇವೆ. ನಿಮ್ಮೆಲ್ಲರಿಗೂ ನಾವು ಅಭಿವೃದ್ಧಿಯ ಭರವಸೆ ನೀಡುತ್ತೇವೆ. ಪ್ರಾಣದ ಕೊನೆಯ ಉಸಿರು ಇರೋ ವರೆಗೂ ನಿಮ್ಮ ಸೇವೆ ಮಾಡುತ್ತೇವೆ. ಹತ್ತಾರು ಕಾರ್ಯಕ್ರಮದ ಮೂಲಕ ನಿಮ್ಮ ಆಸ್ತಿ ಮೌಲ್ಯ ಹೆಚ್ಚಾಗಬೇಕು ಎಂದು ಹೇಳಿದರು.

ನಾನು ಬೆಂಗಳೂರಿಗೆ ಮಂತ್ರಿ, ಮೆಟ್ರೋಗೂ ನಾನೇ ಮಂತ್ರಿ

ನಾವೆಲ್ಲಾ ಬೆಂಗಳೂರು ಜಿಲ್ಲೆಯವರು. ನಮ್ಮ ಸ್ವಾಭಿಮಾನ ನಿಮಗೆ ಉದ್ಯೋಗ ಸೃಷ್ಠಿ ಆಗಬೇಕು. ನಾನು ಬೆಂಗಳೂರಿಗೆ ಮಂತ್ರಿ, ಮೆಟ್ರೋಗೂ ನಾನೇ ಮಂತ್ರಿ. ಶೀಘ್ರದಲ್ಲೇ ನಿಮ್ಮ ಬಿಡದಿಗೆ ಮೆಟ್ರೋ ಬರಲಿದೆ. ಗ್ರೇಟರ್ ಬೆಂಗಳೂರಿಗೆ ನಿಮ್ಮ ಬಿಡದಿ ಸೇರುತ್ತದೆ ಎಂದು ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು.

RELATED ARTICLES

Related Articles

TRENDING ARTICLES