Thursday, April 25, 2024

ಶಾಸಕರ ನಿಧನದ ಸುದ್ದಿ ತಿಳಿದು ಹೃದಯಾಘಾತದಿಂದ ಅಭಿಮಾನಿ ಸಾವು

ಯಾದಗಿರಿ : ಸುರಪುರ ಕಾಂಗ್ರೆಸ್​ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬಹು ಅಂಗಾಂಗ ವೈಫಲ್ಯದಿಂದ ನಿಧನರಾಗಿದ್ದಾರೆ.

ಮತ್ತೊಂದೆಡೆ, ಶಾಸಕರ ನಿಧನದ ಸುದ್ದಿ ತಿಳಿದ ಅಭಿಮಾನಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ದಾರುಣ ಘಟನೆ ಸಂಭವಿಸಿದೆ.

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಮಂಗಳೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹನುಮಂತ ಹವಾಲ್ದಾರ್ (65) ಸಾವನ್ನಪ್ಪಿರುವ ಅಭಿಮಾನಿ. ಈತ ಶಾಸಕರ ಅಪ್ಪಟ ಅಭಿಮಾನಿಯಾಗಿದ್ದರು. ಶಾಸಕರ ನಿಧನ ಸುದ್ದಿ ತಿಳಿದು ಆಘಾತಕ್ಕೊಳಗಾಗಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಸಚಿವ ಬಿ. ನಾಗೇಂದ್ರ ಸಂತಾಪ

ಸುರಪುರ ಶಾಸಕ ರಾಜ ವೆಂಕಟ್ಟಪ್ಪ ನಾಯಕ ನಿಧನಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಸ್ಪೀಕರ್ ಯು.ಟಿ. ಖಾದರ್ ಸೇರಿದಂತೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ. ಯುವ ಸಬಲೀಕರಣ, ಕ್ರೀಡೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ. ನಾಗೇಂದ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ.

ರಾಜ್ಯಕ್ಕೆ ತುಂಬಲಾರದ ನಷ್ಟ

ನಾಲ್ಕು ಬಾರಿ ಶಾಸಕರಾಗಿದ್ದ ವಾಲ್ಮೀಕಿ ಸಮುದಾಯದ ಹಿರಿಯ ನಾಯಕ ಸುರಪುರ ಕ್ಷೇತ್ರದ ಶಾಸಕರಾದ ರಾಜ ವೆಂಕಟಪ್ಪ ನಾಯಕನವರು ಹೃದಯಾಘಾತದಿಂದ ಮೃತ ಪಟ್ಟಿದ್ದಾರೆ. ಇವರ ಅಕಾಲಿಕ ನಿಧನದಿಂದ ರಾಜ್ಯಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಸಚಿವ ನಾಗೇಂದ್ರ ವಿಷಾದ ವ್ಯಕ್ತಪಡಿಸಿದ್ದಾರೆ.

RELATED ARTICLES

Related Articles

TRENDING ARTICLES