Friday, May 3, 2024

ಮುಳ್ಳಯ್ಯನ ಗಿರಿಯಲ್ಲಿ ಕಾಡ್ಗಿಚ್ಚು: ಅಪಾರ ಪ್ರಮಾಣದ ಸಸ್ಯ ಸಂಪತ್ತು ನಾಶ

ಚಿಕ್ಕಮಗಳೂರು: ವಿಶ್ವ ಪ್ರಸಿದ್ಧ ಮುಳ್ಳಯ್ಯನಗಿರಿ ಗುಡ್ಡದಲ್ಲಿ ಕಾಡ್ಗಿಚ್ಚುಹೊತ್ತಿಕೊಂಡ ಪರಿಣಾಮ ನೂರಾರು ಎಕರೆ ಪ್ರದೇಶದಲ್ಲಿದ್ದ ಅಪರೂಪದ ಸಸ್ಯ ಸಂಪತ್ತು ಸುಟ್ಟು ಭಸ್ಮವಾಗಿರುವಂತಹ ಘಟನೆ ಚಿಕ್ಕಮಗಳೂರು ತಾಲೂಕಿನಲ್ಲಿ ನಡೆದಿದೆ.

ಮುಳ್ಳಯ್ಯನಗಿರಿ ಸಮೀಪದ ಬೈರೇಗುಡ್ಡ ಎಂಬಲ್ಲಿ ಕಾಡಿಗೆ ಬೆಂಕಿ ಬಿದ್ದಿದ್ದು, ನೂರಾರು ಎಕರೆ ಅರಣ್ಯ ಸುಟ್ಟು ಬೂದಿಯಾಗಿದೆ. ಈ ಗಿರಿಯಲ್ಲಿದ್ದ ವಿಶಿಷ್ಟ ತಳಿಯ ಗಿಡ ಮರಗಳು ಔಷಧಿ ಸಸ್ಯಗಳು ಸೇರಿದಂತೆ ಪರಿಸರವನ್ನೆ ಅವಲಂಬಿಸಿದ್ದ ಅನೇಕ ಪ್ರಾಣಿ ಪಕ್ಷಿಗಳು, ಸರಿಸೃಪಗಳು, ಕೀಟಗಳು ಬೆಂಕಿಗೆ ಆಹುತಿಯಾಗಿರಬಹುದು ಎಂದು ಶಂಕಿಸಲಾಗಿದೆ.

ಇದನ್ನೂ ಓದಿ: ಟಿಪ್ಪು ಸುಲ್ತಾನ್​ನ ಮೊದಲ ಹೆಸರು ತಿಪ್ಪೇಸ್ವಾಮಿ ಎಂದ ಕಾಂಗ್ರೆಸ್​ ನಾಯಕ

ಬೈರೇಗುಡ್ಡ ಸಮೀಪ ಹೊತ್ತಿದ ಕಾಡ್ಗಿಚ್ಚು ಕವಿಕಲ್ ಗಂಡಿ ಅರಣ್ಯದವರೆಗೂ ಗುಡ್ಡದಿಂದ ಗುಡ್ಡಕ್ಕೆ ವ್ಯಾಪಿಸಿದೆ. ಕಾಡ್ಗಿಚ್ಚಿನ ಸ್ಥಳಕ್ಕೆ ಹೋಗಲಾರದೇ ಅರಣ್ಯಾಧಿಕಾರಿಗಳು ಪರದಾಡುವಂತಾಗಿದೆ. ಬೈರೇಗುಡ್ಡ ಅತ್ಯಂತ ಎತ್ತರ, ಅರಣ್ಯ ಹಾಗೂ ಇಳಿಜಾರಿನ ಪ್ರದೇಶವಾಗಿದೆ. ಮುಳ್ಳಯ್ಯನಗಿರಿಯಲ್ಲಿ ಬೀಸುವ ಭಾರೀ ಗಾಳಿಗೆ ಬೆಂಕಿಯ ಕೆನ್ನಾಲಿಗೆ ಹೆಚ್ಚಿದ್ದರಿಂದ ಅರಣ್ಯ ಪ್ರದೇಶ ಸುಟ್ಟು ಕರಕಲಾಗಿದೆ. ಬಿಸಿಲ ಝಳಕ್ಕೆ ಸಂಪೂರ್ಣ ಒಣಗಿ ನಿಂತಿದ್ದ ಅರಣ್ಯಕ್ಕೆ ಸ್ಥಳೀಯರೇ ಬೆಂಕಿ ಕೊಟ್ಟಿರಬಹುದು ಎಂದೂ ಶಂಕಿಸಲಾಗಿದೆ.

RELATED ARTICLES

Related Articles

TRENDING ARTICLES