ದ್ವಾರಕಾದ ಅವಶೇಷ ವೀಕ್ಷಿಸಿದ ಪ್ರಧಾನಿ ಮೋದಿ

0
199

ದೆಹಲಿ : ಪ್ರಧಾನಿ ನರೇಂದ್ರ ಮೋದಿ ಗುಜರಾತ್ ಪ್ರವಾಸದ ಎರಡನೇ ದಿನಕ್ಕೆ ಕಾಲಿಟ್ಟಿದ್ದು ಕೃಷ್ಣನ ದ್ವಾರಕೆಯನ್ನು ಕಣ್ತುಂಬಿಕೊಳ್ಳಲು ನವಿಲುಗರಿಗಳ ಹಿಡಿದು ಸಮುದ್ರದಾಳಕ್ಕೆ ಇಳಿದಿದ್ದಾರೆ.

ಇಂದು ಸ್ಕೂಬಾ ಡೈವಿಂಗ್ ಮೂಲಕ ದ್ವಾರಕೆಗೆ ತೆರಳಿದ್ದಾರೆ, ಮುಳುಗಡೆಯಾಗಿರುವ ದ್ವಾರಕಾನಗರಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಶ್ರೀಕೃಷ್ಣ ದ್ವಾರಕೆಯ ರಾಜನಾಗಿದ್ದ, ಪ್ರಧಾನಿ ಮೋದಿ ನಗರದ ಭವ್ಯತೆ ಹಾಗೂ ಸಮೃದ್ಧಿಯನ್ನು ನೆನಪಿಸಿಕೊಂಡು ಗೌರವ ಸಲ್ಲಿಸಿದರು.

ಇದನ್ನೂ ಓದಿ: ದೇಶದ ಅತಿ ಉದ್ದದ ಕೇಬಲ್ ಬ್ರಿಡ್ಜ್ ಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಇದೇ ವೇಳೆ ದ್ವಾರಕಾದ ಸುದರ್ಶನ ಸೇತುವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇದು ದೇಶದ ಅತಿ ಉದ್ದದ ಕೇಬಲ್ ಬೆಂಬಲಿತ ಸೇತುವೆಯಾಗಿದೆ. 6 ವರ್ಷಗಳ ಹಿಂದೆ ಈ ಸೇತುವೆಯ ಶಂಕುಸ್ಥಾಪನೆ ಮಾಡಲು ನನಗೆ ಅವಕಾಶ ಸಿಕ್ಕಿತ್ತು ಎಂದು ಸ್ಮರಿಸಿದರು. ಈ ಸೇತುವೆಯು ಓಖಾವನ್ನು ಬೆಟ್ ದ್ವಾರಕಾ ದ್ವೀಪಕ್ಕೆ ಸಂಪರ್ಕಿಸುತ್ತದೆ. ಈ ಸೇತುವೆಯು ದ್ವಾರಕಾಧೀಶನ ದರ್ಶನವನ್ನು ಸುಲಭಗೊಳಿಸುತ್ತದೆ ಮತ್ತು ಈ ಸ್ಥಳದ ದೈವಿಕತೆಯನ್ನು ಹೆಚ್ಚಿಸುತ್ತದೆ ಎಂದರು.

<blockquote class=”twitter-tweet”><p lang=”en” dir=”ltr”>To pray in the city of Dwarka, which is immersed in the waters, was a very divine experience. I felt connected to an ancient era of spiritual grandeur and timeless devotion. May Bhagwan Shri Krishna bless us all. <a href=”https://t.co/yUO9DJnYWo”>pic.twitter.com/yUO9DJnYWo</a></p>&mdash; Narendra Modi (@narendramodi) <a href=”https://twitter.com/narendramodi/status/1761663670373769451?ref_src=twsrc%5Etfw”>February 25, 2024</a></blockquote> <script async src=”https://platform.twitter.com/widgets.js” charset=”utf-8″></script>

LEAVE A REPLY

Please enter your comment!
Please enter your name here