Saturday, July 27, 2024

ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಸುಮೋಟೋ ಪ್ರಕರಣ ದಾಖಲು

ಶಿರಸಿ: ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ.

 ಹೌದು, ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ಇತ್ತೀಚಿಗೆ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿವಾದಿತ ಹೇಳಿಕೆ ನೀಡಿರುವ ಆರೋಪದಡಿ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಮುಂಡಗೋಡು ಪೊಲೀಸ್ ಠಾಣೆಯಲ್ಲಿ ಸುಮೋಟೋ ಪ್ರಕರಣ ದಾಖಲಾಗಿದೆ.

”ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಸಿದ್ದರಾಮುಲ್ಲಾಖಾನ್” ಎಂದು ವ್ಯಂಗ್ಯವಾಡಿದ್ದರು. ಈ ಕುರಿತು ಮಾಧ್ಯಮದಲ್ಲಿ ಸುದ್ದಿ ಪ್ರಸಾರವಾಗುತಿದ್ದಂತೆ ವಿಡಿಯೋ ತುಣುಕಿನ ಆಧಾರದಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಹಿಂದೆ ಅಯೋಧ್ಯೆ ರಾಮಮಂದಿರ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ ಅನಂತಕುಮಾರ್ ಹೆಗಡೆ, ‘ನೀನು ಬರ್ಲಿ, ಇಲ್ಲ ಬಿಡಲಿ, ರಾಮ ಜನ್ಮಭೂಮಿ ಏನೂ ನಿಲ್ಲೋದಿಲ್ಲ ಮಗನೇ’ ಎಂದು ನಿಂದಿಸಿದ್ದರು. ನಾನು ಅಯೋಧ್ಯೆಗೆ ಹೋಗುತ್ತೇನೆ, ಆದರೆ ಜ. 22 ಕ್ಕೆ ಹೋಗಲ್ಲ, ಆಮೇಲೆ ಹೊಗುತ್ತೇನೆ ಎಂದು ಸಿದ್ದರಾಮಯ್ಯ ಹೇಳುತ್ತಾರೆ.ಮೊದಲು ಹೋಗಲ್ಲ ಅಂದಿದ್ದವರು ಈಗ ಹೋಗುತ್ತೇನೆ ಎನ್ನುತ್ತಿದ್ದಾರೆ. ಇದು ಹಿಂದೂ ಸಮಾಜದ ತಾಕತ್ತು, ದಮ್ ಎಂದು ಹೆಗಡೆ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಸಂಸದ ಅನಂತಕುಮಾರ ಹೆಗಡೆ ವಿರುದ್ಧ‌ ಎಫ್​ಐಆರ್​ ದಾಖಲಾಗಿತ್ತು.

RELATED ARTICLES

Related Articles

TRENDING ARTICLES