ಬೆಂಗಳೂರು : ಸುರಪುರ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ (67) ಅವರು ಬಹು ಅಂಗಾಂಗ ವೈಫಲ್ಯದಿಂದ ನಿಧನರಾಗಿದ್ದಾರೆ.
ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಕೊನೆಯುಸಿರೆಳೆದಿದ್ದಾರೆ. ನಾಳೆ ಅವರ ಹುಟ್ಟೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.
ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ನಾಯಕ ವೆಂಕಟಪ್ಪ ನಾಯಕ ಅವರು, ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ, ಗೆಲುವು ಸಾಧಿಸಿದ್ದರು. ಇತ್ತೀಚೆಗಷ್ಟೇ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.
ದುರಾದೃಷ್ಟವಶಾತ್ ಇಂದು ಬಹು ಅಂಗಾಂಗ ವೈಫಲ್ಯ (ಹೃದಯಾಘಾತ)ದಿಂದ ಹಿರಿಯ ನಾಯಕ ನಿಧನರಾಗಿದ್ದಾರೆ. ಈ ಸುದ್ದಿ ತಿಳಿದ ಕೂಡಲೇ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಅಲ್ಲದೆ, ಮಣಿಪಾಲ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ.